• Home
 • »
 • News
 • »
 • jobs
 • »
 • Islam College: ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ!

Islam College: ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ!

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಹೆಚ್ಚಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು ನಂತರದ ವರ್ಷ ದ್ವಿತೀಯ ಪಿಯುಸಿ ಹೀಗೆ ಪದವಿ ಕಾಲೇಜಿನ ವರೆಗು ಸ್ಥಾಪನೆಯಾಗುವ ನಿರೀಕ್ಷೆ ಇದೆ. 

 • News18 Kannada
 • 4-MIN READ
 • Last Updated :
 • Karnataka, India
 • Share this:

ಬಾಲಕಿಯರಿಗೆ ಮತ್ತು ಬಾಲಕರಿಗೆ  ಪ್ರತ್ಯೇಕ ಶಾಲೆಗಳಿರುವುದನ್ನು (School) ನಾವು ಕಾಣಬಹುದು ಆದರೆ ಈಗ ರಾಜ್ಯದಲ್ಲಿ  ಮುಸ್ಲಿಂ (Muslim) ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಮುಂದಿನ ತಿಂಗಳು ಶಂಕು ಸ್ಥಾಪನೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಇದೆ.


ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ಚರ್ಚೆ ಮಾಡಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆ ಕೂಡಾ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ಶಾಲೆ ನಿರ್ಮಾಣಕ್ಕೆ ಬೇಕಾದ ವೆಚ್ಚವನ್ನು ನೀಡಲು ತೀರ್ಮಾನಿಸಲಾಗಿದೆ.


ಉಡುಪಿ ವಿವಾದ
ಉಡುಪಿಯಲ್ಲಿ ಈಗಾಗಲೇ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಸರ್ಕಾರವು ಮುಸ್ಲಿಂ ಬಾಲಕಿಯರಿಗೆ ಹಿಜಾಬ್​ ಧರಿಸದಂತೆ ಆದೇಶ ಹೊರಡಿಸಿತ್ತು. ಈ ವಿಚಾರದ ಬಗ್ಗೆ ಹಲವಾರು ಚರ್ಚೆ ನಡೆದಿತ್ತು ಅಷ್ಟೇ ಅಲ್ಲ ಈ ಚರ್ಚೆ ಕೋರ್ಟ್​ ಮೆಟ್ಟಿಲೇರಿತ್ತು. ಇದರಿಂದ ಹಲವಾರು ಜನ ಅಸಮಾಧಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಇವತ್ತಿನಿಂದಲೇ ತಯಾರಿ ನಡೆಸಿ


ಈ ವಿಷಯವಾಗಿ ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಅಲ್ಲದೆ ಇಂತಹ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದತ್ತ ಹಿಂದೂ ಸಂಘಟನೆಗಳ ಗಮನಹರಿದಿದೆ.


ಕಾಲೇಜು ಸ್ಥಾಪನೆಯಾಗುವ ಸ್ಥಳ
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್‌ ಕಣ್ಣೂರಿನ 16 ಎಕರೆ ಜಾಗವನ್ನು ಮೀಸಲಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಇನ್ನೂ ಬೇರೆ ಕಡೆಗಳಲ್ಲಿ ಕಾಲೇಜು ಸ್ಥಾಪಿಸುವ ಉದ್ದೇಶ ಹೊಂದಿದೆ. ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ. ಯಾವ ಭಾಗದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹೆಚ್ಚಿರುತ್ತಾರೋ ಆ ಸ್ಥಳದಲ್ಲಿ ಸ್ಥಾಪಿಸಲಾಗುತ್ತದೆ ಎಂದು ತಿಳಿದುಬಂದಿದೆ. 


ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ. 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಹೆಚ್ಚಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು ನಂತರದ ವರ್ಷ ದ್ವಿತೀಯ ಪಿಯುಸಿ ಹೀಗೆ ಪದವಿ ಕಾಲೇಜಿನ ವರೆಗು ಸ್ಥಾಪನೆಯಾಗುವ ನಿರೀಕ್ಷೆ ಇದೆ.


ಶಿಕ್ಷಣದಿಂದ ವಿದ್ಯಾರ್ಥಿನಿಯರು ವಂಚಿತರಾಗಬಾರದು
ಹಿಜಾಬ್‌ ವಿವಾದದ ಬಳಿಕ ರಾಜ್ಯಾದ್ಯಂತ ಸುಮಾರು ಏಳೆಂಟು ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರು ಒಂದೋ ಶಿಕ್ಷಣದಿಂದಲೇ ವಂಚಿತರಾಗುತ್ತಿದ್ದಾರೆ. ಇಲ್ಲವೇ ಮುಸ್ಲಿಂ ಆಡಳಿತದ ಕಾಲೇಜುಗಳಿಗೆ ಹಾಗೂ ಹಿಜಾಬ್‌ಗೆ ಅವಕಾಶವಿರುವ ಖಾಸಗಿ ಕಾಲೇಜುಗಳಿಗೆ ಮಾತ್ರ ಸೇರ್ಪಡೆಯಾಗಿದ್ದಾರೆ ಎಂಬ ಅಂದಾಜಿದೆ. ಆ ಕಾರಣದಿಂದ ಸರ್ಕಾರಿ ಶಾಲೆಗಳನ್ನೇ ತೆರೆಯಲು ನಿರ್ಧರಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಗೆ ಅನುಮತಿ
ಈ ಬೆಳವಣಿಗೆ ನಂತರ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿಯೇ ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಕಾಲೇಜು ಸ್ಥಾಪನೆಗೆ 13 ಅರ್ಜಿ ಸಲ್ಲಿಕೆಯಾಗಿದೆಯಂತೆ. ಸಲ್ಲಿಸಿದ ಅರ್ಜಿಗಳಲ್ಲಿ ಈಗಾಗಲೇ ಎರಡು ಕಾಲೇಜುಗಳು ಮಂಜೂರಾಗಿವೆ. ಮುಂದಿನ ವರ್ಷ ಇನ್ನಷ್ಟು ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ದೊರೆಯುವ ಸಾಧ್ಯತೆ ಇದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸರ್ಕಾರದ ಹೊಸ ನಿರ್ಧಾರ ಗಮನ ಸೆಳೆದಿದೆ.


ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್‌ ಲಕ್ಕಿಸ್ಟಾರ್‌ ಹೇಳಿಕೆ
ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ  ಆರಂಭಿಸಲಾಗುತ್ತಿದೆಯೇ ಹೊರತು ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಅಲ್ಲ. ಖಾಸಗಿ ಕಾಲೇಜುಗಳಲ್ಲಿ ಬಡ ಕುಟುಂಬಗಳಿಗೆ ದುಬಾರಿ ಫೀಸ್‌ ಕಟ್ಟುವುದು ಕಷ್ಟ. ಪ್ರತ್ಯೇಕ ಸರ್ಕಾರಿ ಕಾಲೇಜು ಇದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಬರುತ್ತಾರೆ, ಶಿಕ್ಷಣದಿಂದ ದೂರ ಉಳಿಯುವುದು ತಪ್ಪುತ್ತದೆ ಎನ್ನುವ ದೃಷ್ಟಿಯಿಂದ ವಕ್ಫ್ ಬೋರ್ಡ್‌ ಮೂಲಕ ಆರಂಭಿಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್‌ ಲಕ್ಕಿಸ್ಟಾರ್‌ ತಿಳಿಸಿದ್ದಾರೆ.

First published: