ಇಂದು ಡಿಸೆಂಬರ್ 24 ರಂದು ಬೆಳಿಗ್ಗೆ 9 ರಿಂದ 11 ರವರೆಗೆ ಶಿಕ್ಷಕರ (Teachers) ನೇಮಕಾತಿಯ ಸಾಮಾನ್ಯ ಜ್ಞಾನ ಪರೀಕ್ಷೆಯನ್ನು (Exam) ಉದಯ್ಪುರದಲ್ಲಿ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿರುವ ವಿಚಾರ ಹೊರಬಿದ್ದಿದೆ. ಈ ವಿಷಯ ತಿಳಿದ ತಕ್ಷಣ ಯಾರಿಗೂ ಅನ್ಯಾಯವಾಗಬಾರದೆಂದು ಪರೀಕ್ಷೆಯನ್ನೇ ರದ್ದು (Cancel) ಗೊಳಿಸಿದ ಘಟನೆ (Incident) ಜರುಗಿದೆ. ಪರೀಕ್ಷೆ ಪತ್ರಿಕೆ ಲೀಕ್ ಆಗುವ ವಿಚಾರವನ್ನು ನೀವು ಆಗಾಗ ಕೇಳಿರುತ್ತೀರಿ ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 44 ಜನರನ್ನು ಬಂಧಿಸಿಲಾಗಿದೆ ಎಂದರೆ ನೀವು ಖಂಡಿತ ಆಶ್ಚರ್ಯ ಪಡ್ತೀರಾ.
ಕಷ್ಟ ಪಟ್ಟು ತಿಂಗಳುಗಳ ಕಾಲ ಓದಿ ಸ್ವಯಂ ಪ್ರಯತ್ನದಿಂದ ಪರೀಕ್ಷೆ ಬರೆಯುವ ಜನರು ಎಷ್ಟೋ ಇರುತ್ತಾರೆ. ಆದರೆ ಇದರೊಟ್ಟಿಗೆ ಪರೀಕ್ಷೆಯಲ್ಲಿ ನಕಲು ಮಾಡಿಯೋ ಇಲ್ಲ ಮೊದಲೇ ಈ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿಯೋ ಅನ್ಯಾಯದಿಂದ ಪಾಸ್ ಆಗುವ ವಿದ್ಯಾರ್ಥಿಗಳು ಸಹ ಇರುತ್ತಾರೆ.
ಶಿಕ್ಷಕರ ನೇಮಕಾತಿ ಪರೀಕ್ಷೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ 37 ವಿದ್ಯಾರ್ಥಿಗಳು ಮತ್ತು ಏಳು ತಜ್ಞರು ಸೇರಿದಂತೆ ಕನಿಷ್ಠ 44 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Competitive Exams: ಮನೆಯಲ್ಲೇ ಕೂತು ಈ ರೀತಿಯಾಗಿ ಪರೀಕ್ಷಾ ಸಿದ್ಧತೆ ನಡೆಸಿ, ಹೆಚ್ಚಿನ ಅಂಕ ಗಳಿಸಿ
ರಾಜಸ್ಥಾನ ಪಬ್ಲಿಕ್ ಸರ್ವಿಸ್ ಕಮಿಷನ್ (RPSC) ನಡೆಸುವ ಶಿಕ್ಷಕರ ನೇಮಕಾತಿಗಾಗಿ ಸಾಮಾನ್ಯ ಜ್ಞಾನ ಪರೀಕ್ಷೆಯನ್ನು ಈಗ ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಜೋಧಪುರದ ನಿವಾಸಿ ಸುರೇಶ್ ವಿಷ್ಣೋಯ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ.
ಶಿಕ್ಷಕರ ನೇಮಕಾತಿ ಪರೀಕ್ಷೆ ರದ್ದು
ಈ ಕುರಿತು ಮುಖ್ಯಮಂತ್ರಿ ಗೆಹ್ಲೋಟ್ ಪರೀಕ್ಷೆ ರದ್ದುಗೊಳಿಸುವಂತೆ ಸೂಚನೆ ನೀಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ. ಯಾರೇ ಆಗಲಿ ಈರೀತಿ ಮಾಡುವುದು ತ್ಪಪು ಇದರಿಂದ ಪ್ರಾಮಾಣಿಕ ಪ್ರಯತ್ನ ಮಾಡುವ ಎಷ್ಟೋ ವಿದ್ಯಾರ್ಥಿಗಳಿಗೆ ಮೋಸ ಮಾಡಿದಂತಾಗುತ್ತದೆ. ಅವರ ಪ್ರಯತ್ನಕ್ಕೆ ಇಲ್ಲಿ ಬೆಲೆ ಎಂಬಂತಾಗುತ್ತದೆ.
ಪ್ರಶ್ನೆ ಪತ್ರಿಕೆ ಸೋರಿಕೆ
ಪ್ರತಿಪಕ್ಷ ಬಿಜೆಪಿ, ಈ ವಿಷಯದ ಬಗ್ಗೆ ಸರ್ಕಾರವನ್ನು ಗುರಿಯಾಗಿಸಿಕೊಂಡು ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿತು. ಪೇಪರ್ ಸೋರಿಕೆ ಮಾಡಿದ ಅಭ್ಯರ್ಥಿಗಳು ಬಸ್ನಲ್ಲಿ ಪ್ರಯಾಣಿಸುತ್ತಿರುವುದು ತಿಳಿದುಬಂದು ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಭ್ಯರ್ಥಿಗಳು ತಮ್ಮ ಬಳಿ ಸೋರಿಕೆಯಾದ ಪರೀಕ್ಷಾ ಪತ್ರಿಕೆಯನ್ನು ಹೊಂದಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು ಎಂದು ಹೇಳಲಾಗಿದೆ.
ಶಂಕಿತರ ಬಂಧನ
ಶಂಕಿಸಿ ಬಸ್ ಪ್ರಕಾಣಿಕರನ್ನು ತಡೆದು ಆರೋಪಿಗಳನ್ನು ಬಂಧಿಸಲಾಗಿದೆ. ಕನಿಷ್ಠ 37 ಅಭ್ಯರ್ಥಿಗಳು ಸೋರಿಕೆಯಾದ ಪ್ರಶ್ನೆ ಪತ್ರಿಕೆಯೊಂದಿಗೆ ಸಿಕ್ಕಿಬಿದ್ದಿದ್ದಾರೆ. ಎಲ್ಲರ ಕೈಯಲ್ಲೂ ಪ್ರಶ್ನೆ ಪತ್ರಿಕೆಗಳು ಲಭ್ಯವಾಗಿದೆ. ತಜ್ಞರು ಮತ್ತು ಇನ್ವಿಜಿಲೇಟರ್ಗಳು ಸೇರಿದಂತೆ ಇತರ ಏಳು ಅಭ್ಯರ್ಥಿಗಳು ಇತರ ಉಪಕರಣಗಳೊಂದಿಗೆ ಪತ್ತೆಯಾಗಿದ್ದಾರೆ. ಅವರೆಲ್ಲರೂ ಜಲೋರ್ ಜಿಲ್ಲೆಯವರು ಎಂದು ತಿಳಿದುಬಂದಿದೆ.
10 ಲಕ್ಷಕ್ಕೆ ಪ್ರಶ್ನೆ ಪತ್ರಿಕೆ ಡೀಲ್
ಈ ಪ್ರಶ್ನೆ ಪತ್ರಿಕೆ ಲೀಕ್ ಮಾಡಲು 10 ಲಕ್ಷ ರೂಪಾಯಿ ತೆಗೆದುಕೊಂಡಿರುವುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ನಿರೀಕ್ಷೆಯಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಡಮ್ಮಿ ಅಭ್ಯರ್ಥಿಗಳಾಗಿ ಕಾಣಿಸಿಕೊಳ್ಳಲು ಯತ್ನಿಸಿದ ಮೂವರನ್ನು ಉದಯಪುರ ಪೊಲೀಸರು ಕಳೆದ ಕೆಲವು ದಿನಗಳಲ್ಲಿ ಬಂಧಿಸಿದ್ದಾರೆ. ಯುವಕರಿಗೆ ಅನ್ಯಾಯವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಯ ಸಾಮಾನ್ಯ ಜ್ಞಾನ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಗೆಹ್ಲೋಟ್ ಶನಿವಾರ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ