ವಿದೇಶಿ ಪ್ರವಾಸಿಗರು ಮತ್ತು ವಿದ್ಯಾರ್ಥಿಗಳಿಗೆ (Students) ಚೀನಾ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದೇಶಿಗರಿಗೆ ಈಗಿರುವ ವೀಸಾ (VISA) ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಮಾರ್ಚ್ 14 ರಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದೆ. ಕೋವಿಡ್ (Covid) ಲಾಕ್‌ಡೌನ್ (Lock Down) ನಿಯಮಗಳ ಸಡಿಲಿಕೆಯಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಚೀನಾ (China) ಸರ್ಕಾರದ ಈ ನಿರ್ಧಾರದಿಂದ ಹಲವು ಭಾರತೀಯ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.
ಚೀನಾದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಕ್ರಮ ಕೈಗೊಂಡಿತ್ತು. ಇದರ ಭಾಗವಾಗಿ ಲಾಕ್‌ಡೌನ್ ಹೇರಲಾಗಿತ್ತು. ಶಿಕ್ಷಣ ಸಂಸ್ಥೆಗಳು ಮತ್ತು ಪ್ರವಾಸಿ ಸ್ಥಳಗಳಿಗೆ ನಿರ್ಬಂಧ ಹೇರಲಾಗಿತ್ತು. ಚೀನಾದಲ್ಲಿರುವ ವಿದೇಶಿಯರನ್ನೂ ಅಲ್ಲಿಂದ ಕಳುಹಿಸಲಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮಧ್ಯದಲ್ಲಿಯೇ ನಿಲ್ಲಿಸಿ ತಮ್ಮ ಸ್ವದೇಶಗಳಿಗೆ ತೆರಳಿದ್ದರು. ಈ ಕ್ರಮದಲ್ಲಿ ಭಾರತೀಯ ವಿದ್ಯಾರ್ಥಿಗಳೂ ಮನೆಯತ್ತ ಮುಖ ಮಾಡಬೇಕಾಯಿತು. ಅಲ್ಲಿನ ವಿಶ್ವವಿದ್ಯಾನಿಲಯಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮತ್ತೆ ಚೀನಾಕ್ಕೆ ಹೋಗಲು ಕಾತುರದಿಂದ ಕಾಯುತ್ತಿದ್ದಾರೆ. ಅಂತವರಿಗೆ ಚೀನಾ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರ್ಧಾರ
ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿದೇಶಿ ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರರಿಗೆ ವೀಸಾ ನೀಡುವ ಪ್ರಕ್ರಿಯೆಯನ್ನು ಪುನರಾರಂಭಿಸುತ್ತಿದೆ ಎಂದು ಘೋಷಿಸಿದೆ. ಈ ಸಡಿಲಿಕೆ ನಾಳೆಯಿಂದ (ಮಾರ್ಚ್ 15) ಜಾರಿಗೆ ಬರಲಿದೆ ಎಂದು ವಲಸೆ ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಅಭ್ಯರ್ಥಿಗಳು ವೀಸಾಗೆ ಅರ್ಜಿ ಸಲ್ಲಿಸಬಹುದು. ವೀಸಾಗಳನ್ನು ಪರಿಶೀಲಿಸುವ ಮತ್ತು ಅನುಮೋದಿಸುವ ಜೊತೆಗೆ, ಮಾರ್ಚ್ 28, 2020 ರ ಮೊದಲು ವೀಸಾಗಳನ್ನು ಪಡೆದವರಿಗೂ ಪ್ರವೇಶವನ್ನು ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಆದರೆ, ವೀಸಾದ ಮಾನ್ಯತೆ ಕಡ್ಡಾಯವಾಗಿದೆ.
ಇದನ್ನೂ ಓದಿ: Exam Rules: ಹತ್ತನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ, ಈ ಬಾರಿ ಪರೀಕ್ಷಾ ನಿಯಮದಲ್ಲಿ ಏನೇನಿದೆ ನೋಡಿ
ಗಡಿಯಾಚೆಗಿನ ಪ್ರಯಾಣಕ್ಕೆ ಅನುಕೂಲವಾಗುವಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ವಿದೇಶಿಗರು ಚೀನಾಕ್ಕೆ ಬರಲು ಅನುಕೂಲವಾಗಲಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಮಾರ್ಚ್ 15 ರಿಂದ ವಲಸೆ ಅಧಿಕಾರಿಗಳು ಎಲ್ಲಾ ರೀತಿಯ ವೀಸಾಗಳನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ವೀಸಾ ಇಲ್ಲದೆ ಪ್ರವೇಶ ಮಾಡುವಂತಿಲ್ಲ ಎಂಬ ನಿಯಮವಿತ್ತು.
ವೀಸಾ ಮುಕ್ತ ಪ್ರಯಾಣವನ್ನು ಮತ್ತೆ ಪರಿಚಯಿಸಲು ಮತ್ತು ಅದನ್ನು ಇನ್ನಷ್ಟು ಸುಧಾರಿಸಲು ಚೀನಾ ಸರ್ಕಾರ ಸಜ್ಜಾಗಿದೆ. ಈ ಮಟ್ಟಿಗೆ ವೀಸಾ ನೀಡುವ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಕ್ರೂಸ್ ಹಡಗುಗಳ ಮೂಲಕ ಶಾಂಘೈಗೆ ಆಗಮಿಸುವವರಿಗೆ ವೀಸಾ ಇಲ್ಲದೆ ದೇಶವನ್ನು ಪ್ರವೇಶಿಸಲು ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಏಷ್ಯಾದ ಅನೇಕ ಪ್ರವಾಸಿ ಗುಂಪುಗಳಿಗೆ ಮತ್ತು ಹಾಂಗ್ ಕಾಂಗ್ ಮತ್ತು ಮಕಾವುಗಳಿಂದ ಬರುವ ಪ್ರವಾಸಿಗರಿಗೆ ವೀಸಾ ಅಗತ್ಯವನ್ನು ತೆಗೆದುಹಾಕಲು ಚೀನಾ ಯೋಚಿಸುತ್ತಿದೆ.
ವೀಸಾ ಇಲ್ಲದೇ ನೀವೂ ಚೀನಾಕ್ಕೆ ಹೋಗಬಹುದು
ಕಳೆದ ವರ್ಷ ಲಾಕ್‌ಡೌನ್ ಹೇರುವ ನಿರ್ಧಾರದಿಂದ ಅನೇಕ ಭಾರತೀಯ ವಿದ್ಯಾರ್ಥಿಗಳು ಪ್ರಭಾವಿತರಾಗಿದ್ದರು. ಈ ಬಗ್ಗೆ ಚೀನಾ ರಾಯಭಾರಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಭಾರತೀಯ ವಿದ್ಯಾರ್ಥಿಗಳು ಚೀನಾದಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಈಗ ವೀಸಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ, ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಪುನರಾರಂಭಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ