2nd PUC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್​) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಮುಂದೆ ಓದಿ ...
  • Share this:

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಹಿನ್ನೆಲೆಯಲ್ಲಿ ವಿವಿಧೆಡೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅರ್ಧ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ  ಬರುತ್ತಿರುವ ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (Second PUC Examinations) ಗುರುವಾರ ಆರಂಭಗೊಳ್ಳಲಿದ್ದು, ಸಕಲ ಸಿದ್ಧತೆ ನಡೆದಿದೆ. ಇಲಾಖೆಯು ಯಾವುದೇ ಲೋಪ ದೋಷ ಆಗದಂತೆ ಎಚ್ಚರಿಕೆ ವಹಿಸಿದೆ. ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ಶಿಕ್ಷಣ ಇಲಾಖೆ (Education Department) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮನವಿ ಮಾಡಿದೆ.


ಮಾ.29ರವರೆಗೆ ನಿತ್ಯ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್‌ ನಿಷೇಧ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಕಲಬುರ್ಗಿ ಜಿಲ್ಲೆಯಲ್ಲಿ ಒಟ್ಟು 32197 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು ಕಲಬುರ್ಗಿ ನಗರದಲ್ಲಿ 25 ಪರೀಕ್ಷಾ ಕೇಂದ್ರವಿದೆ. ಕಲಬುರ್ಗಿ ಗ್ರಾಮೀಣ ದಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ.


ಇದನ್ನೂ ಓದಿ: 2nd PUC Exam 2023: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿದ್ಯಾರ್ಥಿಗಳೇ ಈ ವಿಚಾರ ಗಮನದಲ್ಲಿರಲಿ, ಆಲ್​ ದಿ ಬೆಸ್ಟ್​


ಬೀದರ್​​ನಲ್ಲಿ  ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ 10-15 ಕ್ಕೆ ಆರಂಭವಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ಬಿಗಿ ಭದ್ರತೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಹೊರಗೆ ಬ್ಯಾಗ್ ಇಟ್ಟು ಒಳಗೆ ತೆರಳಿದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ಜಿಲ್ಲೆಯಾದ್ಯಂತ ಪ್ರಥಮ ಭಾಷೆ ಪರೀಕ್ಷೆ ನಡೆಯುತ್ತಿದೆ.


ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಗೆ ತಪಾಸಣೆ ಮಾಡಿ ಬಿಡ್ತಿರುವ ಸಿಬಂದಿ ಭಿಗಿ ಭದ್ರತೆ ಕೈಗೊಂಡಿದ್ದಾರೆ.
ಕೊಪ್ಪಳ ಹಾಗೂ ರಾಮನಗರ


ಕೊಪ್ಪಳದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದೆ.
ಕೊಪ್ಪಳ ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು
ಒಟ್ಟು 16304 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳು 10.15 ರಿಂದ ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ.
ಮಾರ್ಚ 29 ರವರೆಗೂ ನಡೆಯಲಿರುವ ಪರೀಕ್ಷೆಗೆ ಇಂದಿನಿಂದ ಚಾಲನೆ ಸಿಕ್ಕಿದೆ.


ರಾಮನಗರ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಈ ಜಿಲ್ಲೆಯಲ್ಲಿ ಒಟ್ಟು 9,973 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.


ಚನ್ನಪಟ್ಟಣದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು


ಚನ್ನಪಟ್ಟಣ ಸರ್ಕಾರಿ ಬಾಲಕ ಹಾಗೂ ಬಾಲಕಿಯರ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದೆಅತೀ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗುವ ಕಾಲೇಜು ಇದಾಗಿದೆ. ಎಲ್ಲರೂ ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿದ್ದಾರೆ. ಯಾವುದೇ ಹಿಜಾಬ್ ಗೊಂದಲ ಆಗದ್ದಂತೆ ಎಚ್ಚರಿಕೆ ವಹಿಸಲಾಗಿದೆ. ಪರೀಕ್ಷೆ ಕೇಂದ್ರಗಳಿಗೆ ಸಮವಸ್ತ್ರ ಧರಿಸಿ ಬರುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ.


ರಾಜ್ಯದ ಒಟ್ಟು ಪಿಯು ವಿದ್ಯಾರ್ಥಿಗಳ ಸಂಖ್ಯೆ


ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್​) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳಾಗಿದ್ದಾರೆ. ಪರೀಕ್ಷಾ ಕಾರ್ಯಕ್ಕೆ 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2,373 ವಿಶೇಷ ಜಾಗೃತ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು