UGC NET 2023: ಅನೇಕ ಜನರು ಶಿಕ್ಷಕ ವೃತ್ತಿಯಲ್ಲಿ ಮುಂದುವರೆಯಲು ಬಯಸುತ್ತಾರೆ. ಭಾರತದಲ್ಲಿನ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಲು ಬಯಸುವವರು ಅರ್ಹತಾ ಪರೀಕ್ಷೆಯನ್ನು ಬರೆಯಬೇಕು. ಸಹಾಯಕ ಪ್ರಾಧ್ಯಾಪಕ, ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಗೆ ಅರ್ಹತೆ ಪಡೆಯಬೇಕು. ಈ ಅರ್ಹತಾ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಆದರೆ ಈಗ UGC NET 2023 (UGC NET 2023) ಜೂನ್ ಅಧಿವೇಶನದ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ಅಧಿಕೃತ ವೆಬ್‌ಸೈಟ್ ugcnet.nta.nic.in ನಲ್ಲಿ ನೋಂದಣಿ ಲಿಂಕ್ ಲಭ್ಯವಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಮೇ 10, 2023 ರಿಂದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಜೂನ್ ಅಧಿವೇಶನ 2023 ಗಾಗಿ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸುತ್ತದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಮಮಿದಾಳ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದ್ದಾರೆ. 31 ಮೇ 2023, ಸಂಜೆ 5:00 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ಪರೀಕ್ಷೆಗಳು ಜೂನ್ 13, 2023 ರಿಂದ ಜೂನ್ 22, 2023 ರವರೆಗೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿ ಮತ್ತು ಯಾವುದೇ ಇತರ ನವೀಕರಣಗಳಿಗಾಗಿ ನಿಯಮಿತವಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಅಧಿಕೃತ ವೆಬ್‌ಸೈಟ್‌ಗಳನ್ನು ಪರಿಶೀಲಿಸಲು ಸಲಹೆ ನೀಡಲಾಗಿದೆ.
ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಜೂನ್ ಅಧಿವೇಶನವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಕಂಪ್ಯೂಟರ್ ಆಧಾರಿತ ಮೋಡ್‌ನಲ್ಲಿ ನಡೆಸುತ್ತದೆ. 83 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅರ್ಹತೆ ಪಡೆದ ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.
ನೋಂದಣಿ ಪ್ರಕ್ರಿಯೆ ಮಾಹಿತಿ
- ಮೊದಲ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ugcnet.nta.nic.in ಅನ್ನು ತೆರೆಯಬೇಕು. ನಂತರ ಮುಖಪುಟದಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಅಭ್ಯರ್ಥಿಯ ವಿವರಗಳನ್ನು ನಮೂದಿಸಿ ಮತ್ತು ಅರ್ಜಿ ಪೂರ್ಣಗೊಳಿಸಿ.
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅಂತಿಮವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಭವಿಷ್ಯದ ಬಳಕೆಗಾಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
UGC NET/JRF ಗೆ ನಿರ್ಣಾಯಕ
UGC-NET ಎನ್ನುವುದು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭಾರತೀಯ ನಾಗರಿಕರ ಅರ್ಹತೆಯನ್ನು ನಿರ್ಣಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಯಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಆಯಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಅಥವಾ ರಾಜ್ಯ ಸರ್ಕಾರಗಳ ನೀತಿಗಳಿಗೆ ಒಳಪಟ್ಟಿರುತ್ತಾರೆ.
ನೀವೂ ಕೂಡಾ ಸಹಾಯಕ ಶಿಕ್ಷಕರಾಗಲು ಬಯಸಿದರೆ ಖಂಡಿತ ಇದಕ್ಕೆ ನೀವೂ ಕೂಡಾ ಅಪ್ಲೈ ಮಾಡಬಹುದು. ಆದಷ್ಟು ಬೇಗ ನೀವೂ ಅಪ್ಲೈ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ