ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ (Election) ನಡೆಯಲಿದೆ. ಆ ಕಾರಣದಿಂದ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ನಿಗದಿತ ದಿನಾಂಕದಂದು ಅಂದರೆ ನಾಳೆಯೇ ಫಲಿತಾಂಶ (Result) ಬಿಡುಗಡೆ ಮಾಡಲಾಗುತ್ತಿದೆ. ಹತ್ತನೆ ತರಗತಿ (SSLC) ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನು ಕೇಲವೇ ಕೆಲವು ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗುತ್ತದೆ. ಮೇ 8ನೇ ತಾರೀಖು ಅಂದರೆ ನಾಳೆ ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು (Students) ಏನು ಮಾಡಬೇಕು ಎಂಬುದನ್ನು ನಾವಿಲ್ಲಿ ನೀಡಿದ್ದೇವೆ.
ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಯಾಗಲಿದೆ. ಶಿಕ್ಷಣ ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿ ಅನುಸಾರ ನಾಳೆ ಮೊದಲು ಪ್ರೆಸ್ ಮೀಟ್ ಮಾಡಲಾಗುತ್ತದೆ ನಂತರ ಒಟ್ಟಾರೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗುತ್ತದೆ ಎಂದು ಈ ಹಿಂದೆಯೇ ತಿಳಿಸಲಾಗಿತ್ತು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಯನ್ನು ಈಗಾಗಲೇ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಪರೀಕ್ಷಾ ಮಂಡಳಿಯು ಕರ್ನಾಟಕ SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದೆ.
ಇದನ್ನೂ ಓದಿ: Karnataka SSLC Result 2023: ಕಾತರದಿಂದ ಕಾಯುತ್ತಿರುವ ವಿದ್ಯಾರ್ಥಿಗಳೇ ಗಮನಿಸಿ; ನಾಳೆಯೇ ರಿಸಲ್ಟ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಆರಂಭವಾಗಿತ್ತು. ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಇರುವ ಕಾರಣ ಇದಕ್ಕೂ ಎರಡು ದಿನ ಮೊದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.
ನಾಳೆ 10 ಗಂಟೆಗೆ ಸುದ್ದಿಗೋಷ್ಠಿ ಕರೆದ KSEAB
ಮುಖ್ಯ ಮಾಹಿತಿಗಳನ್ನು ನಾಳೆ ಸುದ್ದಿಗೋಷ್ಟಿಮಾಡಿ ಹಂಚಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳೆಲ್ಲಾ ಈ ಮಾಹಿತಿ ಅನುಸಾರ ನಿಮ್ಮ ಫಲಿತಾಂಶವನ್ನು ನಿರೀಕ್ಷಿಸಬಹುದು. ಬೆಳಿಗ್ಗೆ 11 ಗಂಟೆಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಅಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ. ಈ ಕುರಿತು ಮೇಲಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಲಿಂಕ್ ಬಳಸಿ ಫಲಿತಾಂಶ ಚೆಕ್ ಮಾಡಿ
ಈ ವರ್ಷದ SSLC ವಿದ್ಯಾರ್ಥಿಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ ಕಾರಣ ಹತ್ತಿರ ಬರುತ್ತಿರುವ ಚುನಾವಣೆಯೂ ಒಂದಾಗಿದೆ. ಚುನಾವಣೆಗೆ ಅಡ್ಡಿಯಾಗದಂತೆ ಮಕ್ಕಳಿಗೂ ತೊಂದರೆಯಾಗದಂತೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ. kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ಪರೀಕ್ಷಿಸಿ.
ನಾಳೆ ನಿಮಗೆ ಇದೇ ಲಿಂಕ್ನಲ್ಲಿ ಫಲಿತಾಂಶ ಸಿಗಲಿದೆ. ನಿಮ್ಮ ಜನ್ಮದಿನಾಂಕ ಹಾಗೂ ಹಾಲ್ಟಿಕೆಟ್ ನಂಬರ್ ಹಾಕಬೇಕಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ