ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಇಂದು ರಾಜ್ಯ ಬಜೆಟ್ (Karnataka State Budget 2023-24) ಮಂಡಿಸುತ್ತಿದ್ದಾರೆ. ಈ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದಾರೆ. ಎಲ್ಲಾ ಫ್ರೌಢ ಶಾಲಾ ವಿದ್ಯಾರ್ಥಿಗಳು(Students) ಉನ್ನತ ಶಿಕ್ಷಣ ವನ್ನು ಹೊಂದಲು ಅನುವು ಮಾಡಿಕೊಡಲು 'ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ' ಪ್ರಾರಂಭ ಮಾಡಲಾಗುವುದು ಎಂದು ಬಜೆಟ್ನಲ್ಲಿ ಹೇಳಿದ್ದಾರೆ.
ರಾಜ್ಯ ಪ್ರೌಢ ಶಾಲಾ ಮಕ್ಕಳಿಗೆ ಹೊಸ ಯೋಜನೆ
ಉನ್ನತ ಶಿಕ್ಷಣ ಹೊಂದಲು ಅನುಕೂಲವಾಗುವಂತೆ 'ಮುಖ್ಯಮಂತ್ರಿ ವಿದ್ಯಾಶಕ್ತಿ' ಎಂಬ ಯೋಜನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯತಿ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಅವರು ಹೇಳಿದರು.
ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ ಮಾಡಲಾಗಿದೆ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಮಕ್ಕಳ ಬಸ್ಸು ಹೊಸ ಯೋಜನೆ ಆರಂಭ
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಕ್ಕಳ ಬಸ್ಸು ಎಂಬ ಹೊಸ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ ಶುರುವಾಗಲಿದೆ. ಈಗಾಗಲೇ 19 ಲಕ್ಷ ವಿದ್ಯಾರ್ಥಿಗಳೊಂದಿಗೆ ಹೆಚ್ಚುವರಿಯಾಗಿ 2 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಹೇಳಿದ್ದಾರೆ. ಪಂಗಡಗಳು, ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಬಜೆಟ್ ಕುರಿತಾದ ಲೈವ್ ಅಪ್ಡೇಟ್ಸ್ ಇಲ್ಲಿದೆ: Karnataka Budget 2023 Live Updates: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ
ಕಳೆದ ಆಯವ್ಯಯದಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳನ್ನು ಗುರುತಿಸಿ ಅಂತಹ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕತೆ ಸಂಬಂಧಿಸಿದ ಸೂಚ್ಯಂಕಗಳನ್ನು ರಾಜ್ಯ ಸರಾಸರಿಗಿಂತ ಹೆಚ್ಚು ಮಾಡಲು 3,000 ಕೋಟಿ ರೂ. ಗಳ ಯೋಜನೆಗಳನ್ನು ನಾನು ಘೋಷಿಸಿದ್ದೇನೆ ಎಂದು ಸಿಎಂ ತಿಳಿಸಿದರು. ಇದರಡಿಯಲ್ಲಿ ತೆಗೆದುಕೊಂಡಿರುವ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ಅಗತ್ಯ ಮಾನವ ಸಂಪನ್ಮೂಲಗಳನ್ನು ಒದಗಿಸಿ ಸರ್ಕಾರದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ