ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ,NEET UG 2023ಪರೀಕ್ಷೆಯನ್ನು ಇಂದು ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯನ್ನು ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಬೆಂಗಳೂರಿನಲ್ಲೂ ಪರೀಕ್ಷೆ (Exam) ನಡೆಯುತ್ತಿದ್ದು ಪ್ರಧಾನಿ ರೋಡ್ ಶೋ ವಿಚಾರವಾಗಿ ವಿದ್ಯಾರ್ಥಿಗಳಲ್ಲಿ ಸ್ವಲ್ಪ ಆತಂಕ ಸೃಷ್ಟಿಯಾಗಿತ್ತು. ಆದರೆ ಇಂದೇ ಪರೀಕ್ಷೆಯನ್ನು ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ವಿಚಾರವಾಗಿ ಯಾವುದೇ ಗೊಂದಲ ಬೇಡ. ಆದರೆ ಅಭ್ಯರ್ಥಿಗಳು ಮಣಿಪುರದಲ್ಲಿ ಯಾರೆಲ್ಲಾ ಪ್ರವೇಶ ಪರೀಕ್ಷೆಯನ್ನು ಬರೆಯುತ್ತಿದ್ದಾರೋ ಅವರ ಪರೀಕ್ಷಾ ದಿನಾಂಕವನ್ನು ಬದಲು ಮಾಡಲಾಗಿದೆ. ಯಾಕೆ ಎಂಬ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ.
NEETಮಣಿಪುರದಲ್ಲಿ ಯುಜಿ 2023 ಪರೀಕ್ಷೆಯನ್ನು ಮುಂದೂಡಲಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಪರಿಗಣಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ಎಎನ್‌ಐ ತನ್ನ ಟ್ವೀಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಮಣಿಪುರದಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಿದ ಅಭ್ಯರ್ಥಿಗಳಿಗೆ ನೀಟ್ (ಯುಜಿ)-2023 ಪರೀಕ್ಷೆಯನ್ನು ಮುಂದೂಡಲಾಗಿದೆ ಮತ್ತು ಅವರ ಪರೀಕ್ಷೆಯನ್ನು ನಂತರದ ದಿನಾಂಕದಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಶಿಕ್ಷಣ ಸಚಿವ ಡಾ ರಾಜ್‌ಕುಮಾರ್ ರಂಜನ್ ಸಿಂಗ್ ಅವರಿಗೆ ಪತ್ರ ಬರೆಯುವ ಮೂಲಕ ಸಮಸ್ಯೆಗಳ ಬಗ್ಗೆ ವಿಚಾರವನ್ನು ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: NEET UG ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮೋದಿ ಅಭಯ
ಮಣಿಪುರದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮರು ನಿಗದಿಪಡಿಸುವ ಸಾಧ್ಯತೆಯನ್ನು ಸೂಚಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ, NTA ಮಣಿಪುರದಲ್ಲಿ ಪರೀಕ್ಷೆಗಳನ್ನು ನಡೆಸಲು ಪರಿಷ್ಕೃತ ದಿನಾಂಕವನ್ನು ಪ್ರಕಟಿಸಿಲ್ಲ. ಪರೀಕ್ಷೆಯ ದಿನಾಂಕವನ್ನು ಘೋಷಿಸಿದ ನಂತರ, NTA ಅಭ್ಯರ್ಥಿಗಳಿಗೆ ಪರಿಷ್ಕೃತ ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡುವ ದಿನಾಂಕವನ್ನು ಸಹ ಪ್ರಕಟಿಸುತ್ತದೆ.
ಪರೀಕ್ಷಾ ಕೇಂದ್ರ ಮತ್ತು ಸಮಯವು ಒಂದೇ ಆಗಿರುವ ಸಾಧ್ಯತೆಯಿದೆ, ಕೇವಲ ದಿನಾಂಕವನ್ನು ಬದಲಾಯಿಸಲಾಗುತ್ತದೆ ಎಂದು ಹೇಳಿದ್ದಾರೆ. ಸದ್ಯದಲ್ಲೇ ನವೀಕರಿಸಿದ ದಿನಾಂಕವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತದೆ. ಪರೀಕ್ಷೆ ಬರೆಯಲು ಸಿದ್ಧರಾದ ವಿದ್ಯಾರ್ಥಿಗಳು ಬದಲಾದ ದಿನಾಂಕದ ಬಗ್ಗೆ ಆಗಾಗ ಅಧಿಕೃತ ಜಾಲತಾಣವನ್ನು ಗಮನಿಸುತ್ತಿರಬೇಕು ಎಂದು ಹೇಳಲಾಗಿದೆ. NEET UG 2023 ಪರೀಕ್ಷೆಯನ್ನು ಮಧ್ಯಾಹ್ನ 2 ರಿಂದ 5:20 ರವರೆಗೆ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರದ ವಿಧಿವಿಧಾನಗಳು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಯ ಸ್ಥಳದಲ್ಲಿ ಪರೀಕ್ಷಾ ಸಮಯಕ್ಕಿಂತ ಮುಂಚಿತವಾಗಿ ಹಾಜರಿರಲು ಕೋರಲಾಗಿದೆ.
ಮಧ್ಯಾಹ್ನ 1:30 ರ ನಂತರ ಅಭ್ಯರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಆ ಕಾರಣದಿಂದ ವಿದ್ಯಾರ್ಥಿಗಳು ಅದಕ್ಕಿಂತ ಮುಂಚೆಯೇ ಪರೀಕ್ಷಾ ಕೇಂದ್ರ ತಲುಪಬೇಕಾಗುತ್ತದೆ. ಉಡುಗೆ ಕೋಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕಾಗುತ್ತದೆ.
ಭಾನುವಾರದ ರೋಡ್‌ಶೋನ ಉದ್ದಕ್ಕೂ ಹೆಚ್ಚಿನ ನೀಟ್ ಪರೀಕ್ಷಾ ಕೇಂದ್ರಗಳು ಇಲ್ಲದಿರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ರೋಡ್ ಶೋ ನಡೆಸಲಾಗುತ್ತದೆ. NEET-UG 2023 ಪರೀಕ್ಷೆಯನ್ನು ಮೇ 7 ರಂದು (ಭಾನುವಾರ) ನಡೆಸಲು ಈ ಹಿಂದೆಯೇ ನಿರ್ಧರಿಸಲಾಗಿತ್ತು. ಆದರೆ ಮೋದಿ ರೋಡ್ ಶೋ ಕೂಡಾ ಬೆಂಗಳೂರಿನಲ್ಲಿ ಇದೇ ದಿನಕ್ಕೆ ನಿಗದಿಯಾಗಿತ್ತು.
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಟ್ರಾಫಿಕ್ ಕಾರಣಕ್ಕಾಗಿ ಸರಿಯಾದ ಸಮಯಕ್ಕೆ ಬರಲಾಗದೇ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಚುನಾವಣಾ ಆಗೋಗಕ್ಕೆ ತಿಳಿಸಲಾಗಿತ್ತು.
ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ರೋಡ್‌ಶೋನಲ್ಲಿ ಈ ದಿನಾಂಕವೂ ಫಿಕ್ಸ್ ಆಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ