ಸ್ವಲ್ಪದಿನಗಳ ಹಿಂದೆ ಕೇರಳದ (Kerala) ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಲು ಕಾಲೇಜ್ಗಳಿಗೆ (College) ಸೂಚನೆ ನೀಡಲಾಗಿತ್ತು. ಅದೇ ರೀತಿ ಇನ್ನುಳಿದ ಕಾಲೇಜ್ಗಳಲ್ಲೂ ರಜೆ ನೀಡಬೇಕು ಎಂಬ ಬೇಡಿಕೆ ಇತ್ತು ಆದರೆ ಈಗ ಅದರ ಕುರಿತು ಮಹತ್ವದ ಮಾಹಿತಿಯೊಂದು ಹೊರ ಬಿದ್ದಿದೆ. ಶೈಕ್ಷಣಿಕ (Education) ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ ಯನ್ನು ಖಚಿತಪಡಿಸುವ ಸಂಬಂಧ ಕಾನೂನು (Law) ತರುವ ಯಾವುದೇ ಪ್ರಸ್ತಾವ ಶಿಕ್ಷಣ ಸಚಿವಾಲಯದ ಮುಂದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಶ್ ಸರ್ಕಾರ್ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ತಿಂಗಳದಲ್ಲಿ ಮೂರರಿಂದ ನಾಲ್ಕು ದಿನ ಋತುಚಕ್ರದ ದಿನಗಳಾಗಿರುತ್ತವೆ. ಆಗ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಆ ಕಾರಣದಿಂದ ಎಷ್ಟೋ ಬಾರಿ ಶಾಲೆಗೆ ಬರಲು ಸಾಧ್ಯವಾಗುವುದಿಲ್ಲ. ಶಾಲಾ ಹಾಜರಾತಿಯಲ್ಲಿ ಕಡ್ಡಾಯವಾಗಿರುವ 75 ಪ್ರತಿಷತ ಹಾಜರಾತಿ ಕಷ್ಟ ಎಂಬಂತಾಗುತ್ತದೆ. ಎನ್ನುವ ಉದ್ದೇಶದಿಂದ ಮುಟ್ಟಿನ ರಜೆ ನೀಡಲಾಗುತ್ತಿತ್ತು.
ಇದನ್ನೂ ಓದಿ: Organic Chemistry: ವಿದ್ಯಾರ್ಥಿಗಳು ಕೆಮಿಸ್ಟ್ರಿ ಕಷ್ಟ ಅನ್ನೋದು ಇದೇ ಕಾರಣಕ್ಕೆ!
ಉಳಿದ ಯಾವ ರಾಜ್ಯಗಳಲ್ಲೂ ಈ ರೀತಿಯ ಯಾವುದೇ ಪ್ರಸ್ತಾವನೆ ಪರಿಗಣನೆಯಲ್ಲಿ ಇಲ್ಲ ಎಂದು ನಿನ್ನೆ ಹೇಳಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಸುರಕ್ಷತಾ ಸೌಲಭ್ಯಗಳನ್ನು ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ರಜೆ ನೀಡುವ ಆಲೋಚನೆ ಇಲ್ಲ ಎಂಬುದು ಸ್ಪಷ್ಟವಾಗಿದೆ.
ಮುಟ್ಟಿನ ದಿನಗಳಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸಮಸ್ಯೆಯಾಗದ ರೀತಿಯಲ್ಲಿ ಅವರಿಗೆ ಬೇಕಾದ ಎಲ್ಲಾ ಸೌಕರ್ಯಗಳನ್ನೂ ಸಹ ನೀಡಲಾಗುತ್ತದೆ. ಆದ್ದರಿಂದ ಸಾಮಾನ್ಯ ರಜೆಗಳು ಮಾತ್ರ ಲಭ್ಯವಿದ್ದು, ವಿದ್ಯಾರ್ಥಿನಿಯರಿಗೆ ಮುಟ್ಟಿನ ದಿನಗಳಲ್ಲಿ ವಿಶೇಷ ರಜೆ ನೀಡುವ ಆಲೋಚನೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
75ರಷ್ಟು ಹಾಜರಾತಿ ಇದ್ದವರು ಮಾತ್ರ ಸೆಮಿಸ್ಟರ್ ಪರೀಕ್ಷೆ ಬರೆಯಬಹುದು.
ಪ್ರಸ್ತುತ ಶೇ. 75ರಷ್ಟು ಹಾಜರಾತಿ ಇದ್ದವರು ಮಾತ್ರ ಸೆಮಿಸ್ಟರ್ ಪರೀಕ್ಷೆ ಬರೆಯಬಹುದು. ಅದಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಮತಿ ಇರುವುದಿಲ್ಲ. 75 ಕ್ಕಿಂತ ಕಡಿಮೆ ಹಾಜರಾತಿ ಇದ್ದರೆ ದಂಡ ಪಾವತಿಸಿ ನಂತರ ಪರೀಕ್ಷೆ ಬರೆಯಬೇಕು ಎಂಬ ನಿಯಮವಿರುವ ಕಾರಣ ವಿದ್ಯಾರ್ಥಿನಿಯರಿಗೆ ಸರಿಯಾಗಿ ಹಾಜರಾತಿ ಸಿಗದೇ ಕಷ್ಟ ಪಡುವ ಹಾಗಾಗುತ್ತಿತ್ತು.
ಈ ಹಿಂದೆ ಕೇರಳದಲ್ಲಿ ನೀಡಿದ್ದ ಮುಟ್ಟಿನ ರಜೆ ಪ್ರಯೋಜ ಪಡೆದ ವಿದ್ಯಾರ್ಥಿಗಳು
ಇದೇ ಮೊದಲ ಬಾರಿಗೆ ಕೇರಳದ ವಿಶ್ವವಿದ್ಯಾಲಯ ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದು ಇತಿಹಾಸ ಸೃಷ್ಟಿಸಿದೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಮೊದಲಬಾರಿಗೆ ಇದನ್ನು ಅನಿಷ್ಠಾನಗೊಳಿಸಿದೆ. ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ವಿದ್ಯಾರ್ಥಿನಿಯರ ಬಹುಕಾಲದ ಬೇಡಿಕೆಯಾಗಿತ್ತು. ಆದರೆ ಈಗ ಆ ಬೇಡಿಕೆಗೆ ಸ್ಪಂದನೆ ದೊರೆತಿತ್ತು.
ಇದರಿಂದ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕುಸಾಟ್‌ನಲ್ಲಿರುವ ಮಹಿಳಾ ವಿದ್ಯಾರ್ಥಿನಿಯರು ಋತುಚಕ್ರದ ರಜೆ ಪಡೆಯಬಹುದು. ಅವರಿಗೆ ಮೂರು ತಿಂಗಳಿಗೆ ಶೇ. 2ರಷ್ಟು ಹಾಜರಾತಿಯನ್ನು ಹೆಚ್ಚುವರಿಯಾಗಿ ರಿಯಾಯತಿ ನೀಡಲಾಗುವುದು ಎಂದು ತಿಳಿಸಲಾಗಿದೆ.
ಈ ಹಿಂದೆ ಕೇರಳದಲ್ಲಿ ಈ ರೀತಿಯಾಗಿ ತಿಳಿಸಲಾಗಿತ್ತು ಆದರೆ ಯುಜಿಸಿಯ ಈಗಿನ ನಿಯಮದ ಪ್ರಕಾರ ಇನ್ಮುಂದೆ ಯಾವ ರಾಜ್ಯದ ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ ನೀಡಲಾಗುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ