• Home
  • »
  • News
  • »
  • jobs
  • »
  • No Scholarship: ಇನ್ಮುಂದೆ 1 ರಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿ ವೇತನ ರದ್ದು!

No Scholarship: ಇನ್ಮುಂದೆ 1 ರಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿ ವೇತನ ರದ್ದು!

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ಸಹ ದೊರೆಯುತ್ತಿತ್ತು. ಆದರೆ ಇನ್ನು ಮುಂದೆ ಹಾಗಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ತಿಳಿಸಲಾಗಿದೆ.

ಮುಂದೆ ಓದಿ ...
  • Share this:

ಇನ್ನು ಮುಂದೆ ಅರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುವ 1 ರಿಂದ 8ನೇ ತರಗತಿ ಮಕ್ಕಳಿಗೆ ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ (Students) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಿಕ್ಷಣ ಮಂಡಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ (Class) ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಹೊರತಾಗಿ ಬೇರೆ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ (Scholarship) ನೀಡಲಾಗುವುದಿಲ್ಲ ಎಂದು ಹೇಳಿದೆ.


1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವಿಲ್ಲ
ಶಿಕ್ಷಣ ಹಕ್ಕು ಕಾಯ್ದೆಯಡಿ 8 ನೇ ತರಗತಿಯವರೆಗೆ ಮಾತ್ರವೇ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದೆ. ಇದಕ್ಕೂ ಮೊದಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ಸಹ ದೊರೆಯುತ್ತಿತ್ತು. ಆದರೆ ಇನ್ನು ಮುಂದೆ ಹಾಗಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಮಹಿಳಾ ಶಿಕ್ಷಣ ಕ್ಷೇತ್ರಕ್ಕೆ ಮಹಾತ್ಮ ಜ್ಯೋತಿಬಾ ಫುಲೆ ಕೊಡುಗೆ, ಸುಧಾರಣೆಗಳೇನು?


ಇದರ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಶಿಕ್ಷಣ ಹಕ್ಕು ಕಾಯ್ದೆ 2009ರ ಅನ್ವಯ ಪ್ರತಿ ಮಗುವಿಗೂ 1 ರಿಂದ 8ನೇ ತರಗತಿವರೆಗೂ ಮಾತ್ರ ಉಚಿತ ಶಿಕ್ಷಣ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದಿದೆ. ಅದರಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ ಎಂದು ಸ್ಪಷ್ಟವಾಗಿ ತಿಳಿಸಿದೆ.


9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಅರ್ಜಿ ಸ್ವೀಕಾರ


ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಸ್ವೀಕರಿಸಬೇಕು ಮತ್ತು ಪರಿಶೀಲಿಸಬೇಕು ಎಂದು ರಾಜ್ಯ, ಜಿಲ್ಲಾ ನೋಡಲ್ ಅಧಿಕಾರಿಗಳಿಗೂ ಇಲಾಖೆ ಸೂಚನೆ ನೀಡಿದೆ. ಈ ತೀರ್ಮಾನಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.


ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾರ


ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಕಲಿಕೆಗೆ ದೊರೆಯುತ್ತಿದ್ದ ಸಹಾಯವೂ ಸಿಗದಂತಾಗುತ್ತದೆ. ಅಷ್ಟೇ ಅಲ್ಲ ಶಿಕ್ಷಣ ಮಂಡಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳಳ ಮೇಲೆ ಹೇರಿಕೆಯಾದಂತಾಗುತ್ತದೆ. ಈ ರೀತಿ ಮಾಡುತ್ತಿರುವುದು ತಪ್ಪು ಎಂಬ ಮಾತು ಕೇಳಿ ಬರುತ್ತಿದೆ.


ಸರ್ಕಾರದ ವಿರುದ್ಧ ಈ ಮಾತು ಕೇಳಿ ಬರುತ್ತಿದೆ


ಹೌದು ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದೆ ಸತಾಯಿಸುತ್ತಿದ್ದ ಸರ್ಕಾರ ಈಗ ರದ್ದು ಮಾಡಿದೆ. ರಾಜ್ಯದಲ್ಲಿ 15 ಜಿಲ್ಲೆಗಳ ಮಕ್ಕಳಿಗೆ ಸಮವಸ್ತ್ರ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಳಪೆ ಶೂ ಸಾಕ್ಸ್ ವಿತರಿಸಿದೆ. ಪ್ರೌಢ ಶಾಲಾ ಮಕ್ಕಳಿಗೆ ಸೈಕಲ್​ ಕೂಡಾ ಸರಿಯಾಗಿ ವತರಣೆಯಾಗುತ್ತಿಲ್ಲ ಎಂಬ ಮಾತೂ ಸಹ ಕೇಳಿಬರುತ್ತಿದೆ. ಒಟ್ಟಿನಲ್ಲಿ ಈ ನಿರ್ಧಾರಕ್ಕೆ ನಿಗದಿತ ಕಾರಣ ಏನು ಎಂಬುದೇ ತಿಳಿದುಬರುತ್ತಿಲ್ಲ.

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು