• ಹೋಂ
  • »
  • ನ್ಯೂಸ್
  • »
  • Jobs
  • »
  • PUC ವಿದ್ಯಾರ್ಥಿಗಳೇ ಗಮನಿಸಿ, ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆಯಾಗಿದೆ

PUC ವಿದ್ಯಾರ್ಥಿಗಳೇ ಗಮನಿಸಿ, ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆಯಾಗಿದೆ

ವಿದ್ಯಾರ್ಥಿಗಳು

ವಿದ್ಯಾರ್ಥಿಗಳು

ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದೆ. ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಮುಂದೆ ಓದಿ ...
  • Share this:

ಇಷ್ಟು ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಿದ್ದ ಪ್ರಶ್ನೆ ಪತ್ರಿಕೆಗೂ ಈ ಬಾರಿ ಪ್ರಶ್ನೆ ಪತ್ರಿಕೆಗೂ ಇರುವ ಮಾದರಿ ಬದಲಾಗಿದೆ. ಮಾದರಿ ಬದಲಾದ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇನ್ನಷ್ಟು ಪರಿಣಾಮಕಾರಿಯಾಗಿದೆ. ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಹಾಗೂ ಸರಳವಾಗುವ ರೀತಿಯಲ್ಲಿ ಇದನ್ನು ತಯಾರಿಸಲಾಗಿದೆ. ಆದ್ದರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಇದೊಂದು ಸಂತಸದ ಸುದ್ದಿ ಎಂದೇ ಹೇಳಬಹುದು. ಮಾರ್ಚ್​​ 9 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯಲ್ಲಾಗಿರುವ ಬದಲಾವಣೆ ಏನು ಎಂಬ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 10 ಅಂಕಗಳಿಗೆ ಬಹು ಆಯ್ಕೆ ಮಾದರಿ (MCQ) ಪ್ರಶ್ನೆಪತ್ರಿಕೆ ನೀಡಿದೆ.


ಇದನ್ನೂ ಓದಿ: VAIBHAV Fellowship: ಒಮ್ಮೆ ಅಪ್ಲೈ ಮಾಡಿದರೆ ಸಾಕು 3 ವರ್ಷ ಬರುತ್ತೆ 37ಲಕ್ಷ ಸ್ಕಾಲರ್​ ಶಿಪ್​​!


ಮಾರ್ಚ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ಇದು ತುಂಬಾ ಸಹಾಯವಾಗಲಿದ್ದು ಈ ಬಾರಿ ಬಹು ಆಯ್ಕೆಯ ಪ್ರಶ್ನೆಗಳೂ ಸಹ ಪ್ರಶ್ನೆ ಪತ್ರಿಕೆಯಲ್ಲಿ ಇರಲಿವೆ. ಯಾವ ಮಾದರಿಯಲ್ಲಿ ಎಷ್ಟು ಅಂಕಗಳಲ್ಲಿ ಪ್ರಶ್ನೆ ಬರುತ್ತದೆ ಎನ್ನುವ ಕುರಿತು ಇಲ್ಲಿ ಸರಿಯಾದ ರೀತಿಯ ಮಾದರಿಯನ್ನು ನೀಡಲಾಗಿದೆ.


ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದೆ. ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ. ಬಹು ಆಯ್ಕೆ ಪ್ರಶ್ನೆಗಳಿದ್ದರೆ ಹೆಚ್ಚು ಅಂಕ ತೆಗೆಯಲು ಸಾಧ್ಯವಾಗುತ್ತದೆ. ಆ ಕಾರಣದಿಂದ ಈ ಮಾದರಿಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.




ವಿವಿಧ ವಿಭಾಗದಲ್ಲಿ ಕ್ರಮವಾಗಿ 2 ಅಂಕದ 11 ಪ್ರಶ್ನೆಗಳನ್ನು ನೀಡಿದೆ. 3 ಅಂಕದ 4 ಪ್ರಶ್ನೆಗಳು, 4 ಅಂಕದ 6 ಪ್ರಶ್ನೆಗಳು, 5 ಮತ್ತು 6 ಅಂಕದ 2 ಪ್ರಶ್ನೆಗಳನ್ನು ನೀಡಲಾಗಿದೆ. ಒಟ್ಟಾರೆ 80 ಅಂಕಗಳಿಗೆ ವಿಸ್ತ್ರತವಾಗಿ ವಾಕ್ಯ ರೂಪದಲ್ಲಿ ಉತ್ತರಿಸುವ ಪ್ರಶ್ನೆಗಳಿವೆ. ಇದರಲ್ಲಿ ಸಂದಂರ್ಭ ಸೂಚಿಸಿ ಬರೆಯುವುದು, ಸ್ವಾರಸ್ಯ ರೂಪದಲ್ಲಿ ಉತ್ತರ, ಪದ್ಯದ ಭಾವಾರ್ಥ, ಭಾಷಾಭ್ಯಾಸ, ಪ್ರಬಂಧ, ಪತ್ರಲೇಖನ ಮತ್ತು ಗಾದೆ ಮಾತು ವಿಸ್ತರಿಸಿ ಬರೆಯುವ ಪ್ರಶ್ನೆಗಳನ್ನು ನೀಡಲಿದೆ.


ಅಧಿಕೃತ ಜಾಲತಾಣದಿಂದ ನೀವು ಪ್ರಶ್ನೆ ಪತ್ರಿಕೆಯನ್ನೂ ಸಹ ಡೌನ್ಲೋಡ್​ ಮಾಡಿಕೊಳ್ಳಬಹುದು. ಅಲ್ಲಿ ಈ ಬಾರಿಯ ಹೊಸ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಆ ಕಾರಣದಿಂದ ನೀವೂ ಹೆಚ್ಚಿನ ಅಭ್ಯಾಸವನ್ನು ಮಾಡುವುದಕ್ಕೆ ಇದು ಸಹಾಯವಾಗಲಿದೆ. ಈ ಕೂಡಲೇ ಅದನ್ನು ಡೌನ್ಲೋಡ್​ ಮಾಡಿ ಒಮ್ಮೆ ಕಣ್ಣಾಡಿಸಿ ನಿಜವಾದ ಪೇಪರ್​ ಹೇಗಿರುತ್ತೆ ಎಂಬ ಒಂದು ಚಿತ್ರಣ ನಿಮ್ಮ ಮನಸಿನಲ್ಲಿ ಮೂಡುತ್ತದೆ.


ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂದು ಈ ಮಾದರಿ
ಒಂದು ಅಂಕದ 20 ಪ್ರಶ್ನೆಗಳಿದ್ದರೆ ಅಲ್ಲೇ ವಿದ್ಯಾರ್ಥಿಗಳು ಪಾಸ್​ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಫೇಲಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಈ ರೀತಿ ಪ್ರಶ್ನೆ ಪತ್ರಿಕೆ ರೆಡಿ ಮಾಡಲಾಗಿದೆ ಎಂದು ಹೇಳಲಾಗಿದೆ. ನಿಜಕ್ಕೂ ವಿದ್ಯಾರ್ಥಿಗಳಿಗೆ ಇದರಿಂದ ಸಹಾಯವಾಗಲಿದೆ. ಉತ್ತರ ಗೊತ್ತಿಲ್ಲದ ಎಷ್ಟೋ ಜನರು ನಾಲ್ಕು ಆಯ್ಕೆ ಇರುವುದರಿಂದ ಸುಲಭವಾಗಿ ಅಂದಾಜಿಸಿಯಾದರೂ ಉತ್ತರಿಸುತ್ತಾರೆ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ಈ ಬಾರಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ರೀತಿಯಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ ಎಂಬುದಂತು ನಿಜ.

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು