• Home
  • »
  • News
  • »
  • jobs
  • »
  • Public Exam: ವಿದ್ಯಾರ್ಥಿಗಳ ಪಬ್ಲಿಕ್​​ ಪರೀಕ್ಷೆ ನಿರ್ಧಾರವನ್ನು ತಕ್ಷಣವೇ ಕೈ ಬಿಡಲು ಆಗ್ರಹ

Public Exam: ವಿದ್ಯಾರ್ಥಿಗಳ ಪಬ್ಲಿಕ್​​ ಪರೀಕ್ಷೆ ನಿರ್ಧಾರವನ್ನು ತಕ್ಷಣವೇ ಕೈ ಬಿಡಲು ಆಗ್ರಹ

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ಕರ್ನಾಟಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮವನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸುತ್ತಿದೆ. CBSE ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಕೇಂದ್ರ ಸರ್ಕಾರ ನಡೆಸುವ ಶಾಲೆಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಇದು ತಾರತಮ್ಯ ಎಂದು ಪೋಷಕರು ಆರೋಪಿಸಿದ್ದಾರೆ. 

ಮುಂದೆ ಓದಿ ...
  • News18 Kannada
  • 3-MIN READ
  • Last Updated :
  • Karnataka, India
  • Share this:

5 ಮತ್ತು 8 ನೇ ತರಗತಿಗಳಿಗೆ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿರುವುದು ರಾಜ್ಯದಲ್ಲಿ ಹೊಸ ವಿವಾದವನ್ನು ಹುಟ್ಟುಹಾಕಿದೆ.  5 ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೂ ಈ ಬಾರಿ ಪಬ್ಲಿಕ್​ ಪರೀಕ್ಷೆ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಸೂಚಿಸಿತ್ತು. ಆದರೆ ಇದೀಗ ಈ ಕುರಿತು ವಿರೋಧ (Oppose) ವ್ಯಕ್ತವಾಗುತ್ತಿದೆ. ಪಾಲಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯಕ್ಕೆ ಇಲ್ಲಿ ಆದ್ಯತೆ ನೀಡಿರಲಿಲ್ಲ ಇದೀಗ ಪಾಲಕರು (Parents) ಈ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಮತ್ತು ಪಬ್ಲಿಕ್​ ಪರೀಕ್ಷೆ (Exam) ಮಾಡುವುದು ಬೇಡ ಎಂಬ ಮಾತಾನಾಡುತ್ತಿದ್ದಾರೆ.


5- 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಸರಿಯಲ್ಲ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ ಕೈಗೊಂಡಿರುವ ತೀರ್ಮಾನದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸ ಬೇಕಾಗುತ್ತದೆ. ಎಷ್ಟೋ ಪಾಲಕರಿಗೂ ಇದು ಸರಿ ಅನಿಸುತ್ತಿಲ್ಲ. ಪೋಷಕರು ಆತಂಕಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ರಾಜ್ಯಾಧ್ಯಕ್ಷ ಎಸ್. ಲಕ್ಷ್ಮಿನಾರಾಯಣ ಹೇಳಿದ್ದಾರೆ.


ಪಾಲಕರ ವಿರೋಧ
ರಾಷ್ಟೀಯ ಶಿಕ್ಷಣ ನೀತಿಗೆ ಕೂಡ ಇದು ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ದೇಶದ ಶಿಕ್ಷಣದಲ್ಲಿ ಇದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇದರಿಂದ ಮಕ್ಕಳಿಗೂ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ. 5, 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಈಗಲೇ ಕೈ ಬಿಡಬೇಕು ಎಂದೂ ಸಹ ಹೇಳಿದ್ದಾರೆ.


ಇದನ್ನೂ ಓದಿ: UPSC CSE ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ ನೋಡಿ! ಫೆಬ್ರವರಿ 1 ರಿಂದ ಪ್ರಿಲಿಮ್ಸ್ ಪರೀಕ್ಷೆಗೆ ನೋಂದಾಯಿಸಿ


ಕರ್ನಾಟಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮವನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸುತ್ತಿದೆ. CBSE ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಕೇಂದ್ರ ಸರ್ಕಾರ ನಡೆಸುವ ಶಾಲೆಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಇದು ತಾರತಮ್ಯ ಎಂದು ಪೋಷಕರು ಆರೋಪಿಸಿದ್ದಾರೆ. ಡಿಸೆಂಬರ್ 12 ರಂದು ಪರೀಕ್ಷೆಗಳನ್ನು ನಡೆಸುವ ಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಎರಡು ತಿಂಗಳಲ್ಲಿ ಪಬ್ಲಿಕ್ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬಹುದು ಎಂಬ ಪ್ರಶ್ನೆಗಳು ಉದ್ಭವವಾಗಿತ್ತು. ಮತ್ತು ಈ ನಿರ್ಧಾರ ಸರಿ ಅಲ್ಲ ಎಂಬುದು ತಿಳಿದುಬಂದಿತ್ತು.


ಚುನಾವಣೆ ಸಮಯದಲ್ಲಿ ಈ ನಿರ್ಧಾರ


ಸಚಿವ ನಾಗೇಶ್ ಅವರು ಚುನಾವಣಾ ಸಮಯದಲ್ಲಿ ತೋರಿಸಿಕೊಳ್ಳಲು ಮಾತ್ರ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ರೀತಿಯ ನಿರ್ಧಾರ ತಪ್ಪು ನಿರ್ಧಾರ. ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವ ನಾಗೇಶ್ ಸ್ಪಷ್ಟಪಡಿಸಿದ್ದರು. ಆದರೆ ಇದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.


ಈ ಹಿಂದೆ ನೀಡಲಾಗಿದ್ದ ಸೂಚನೆ
ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಗೆ ಮಟ್ಟವೇನು? ಅವರ ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಕಲಿಕಾ-ಫಲಗಳನ್ನು/ಸಾಮಾರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ ಎಂದು ಸರ್ಕಾರ ಈ ಹಿಂದೆ ಹೇಳಿತ್ತು.  ಇದಾದ ಬಳಿಸಕ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ. ಈ ಕುರಿತು ಶಿಕ್ಷಣ ಸಚಿವರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಕಾದು ನೋಡಬೇಕಿದೆ.

First published: