ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 5 ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗಿತ್ತು. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 17 ಲಕ್ಷ ವಿದ್ಯಾರ್ಥಿಗಳು ಇಂದು ಐದನೇ ತರಗತಿ (5th Class) ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಬರೆದಿದ್ದಾರೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಇಂತಹ ಪ್ರಯೋಗ ಮಾಡಲಾಗಿತ್ತು. 5 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರಿಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಕುರಿತು ಎಷ್ಟು ಪರ ವಿರೋಧ ಚರ್ಚೆಯಾಗಿದ್ದರೂ ಕೊನೆಗೆ ಕೋರ್ಟ್ ತೀರ್ಪಿನ ಪ್ರಕಾರ ಪರೀಕ್ಷೆಯನ್ನು ನಡೆಸಲಾಗಿತ್ತು.
ಆದರೆ ಇದೀಗ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಆ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಎಂಬ ಪ್ರಶ್ನೆ ಉದ್ಭವವಾಗಿದೆ. ಏಕೆಂದರೆ ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿವರೆಗೆ ಕಡ್ಡಾಯ ಶಿಕ್ಷಣ ಇದೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಅವರಿಗೆ ಮರು ಪರೀಕ್ಷೆಯನ್ನು ಮಾಡಬೇಕು ಎಂದು ಹೇಳಲಾಗಿದೆ.
ಇದನ್ನೂ ಓದಿ: UNESCO: ಏಪ್ರಿಲ್ ತಿಂಗಳಲ್ಲಿ ನೀವು ಅಪ್ಲೈ ಮಾಡಬಹುದಾದ ಸ್ಕಾಲರ್ ಶಿಪ್ ಇದು
ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂಬ ಕಾರಣಕ್ಕೆ ಈ ಮರು ಪರೀಕ್ಷೆಯನ್ನು ಮಾಡಲಾಗುತ್ತಿದೆ. ಈ ಪರೀಕ್ಷೆಯನ್ನು ವಿದ್ಯಾರ್ಥಿಗಳ ಉನ್ನತಿಗಾಗಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಬ್ಲಿಕ್ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಪರೀಕ್ಷೆ ನಡೆಸಲಾಗುತ್ತಿದೆ. ಹೊರತಾಗಿ ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪೇಲ್ ಆದರೆ ಅವರನ್ನು ಕಡೆಗಣಿಸುವಂತಿಲ್ಲ ಎಂದು ಹೇಳಿಯೇ ಪರೀಕ್ಷೆ ಮಾಡಲಾಗಿತ್ತು.
ಅದರಂತೆ ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲಾಗುತ್ತದೆ.17 ಲಕ್ಷ ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ವಿಶಾಲ್ ಆರ್ ತಿಳಿಸಿದ್ದಾರೆ. 5 ನೇ ತರಗತಿ ವಿದ್ಯಾರ್ಥಿಗಳು ಮಾರ್ಚ್ 30 ರಂದು ಪರೀಕ್ಷೆಗಳನ್ನು ಪೂರ್ಣಗೊಳಿಸಿದರೆ, 8 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 1 ರಂದು ಮುಕ್ತಾಯಗೊಂಡಿದೆ.ತಾಲೂಕು ಮಟ್ಟದಲ್ಲಿ 5 ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 7 ರಂದು ಮೌಲ್ಯಮಾಪನ ಮಾಡಲಾಗಿತ್ತು.
ಕಡಿಮೆ ಅಂಕ ಬಂದ ವಿದ್ಯಾರ್ಥಿಗಳಿಗೆ ಮತ್ತೆ ತರಗತಿಗಳನ್ನು ನೆಡೆಸಿ ಅವರಿಗೆ ಬೇಕಾದ ಕಲಿಕೆಯನ್ನು ನೀಡಿ ನಂತರ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಷೇಶ ತಗರತಿಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಪೂರಕ ಶಿಕ್ಷಣ ನೀಡಿ ಅವರ ಕಲಿಕೆಯನ್ನು ಸುಧಾರಿಸುವ ಕೆಲಸವನ್ನು ಮಾಡಲಾಗುತ್ತದೆ.
ಈ ಪರೀಕ್ಷೆ ನಡೆಸಲು ಹಿಂದಿರುವ ಕಾರಣ
ಈ ಪರೀಕ್ಷೆ ಕೇವಲ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ನಡೆಸಲಾಗುತ್ತಿದೆ. ಪರೀಕ್ಷೆಯ ನಂತರ ಫಲಿತಾಂಶ ಬಿಡುಗಡೆಯಾಗಲಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಫಲಿತಾಂಶ ತಿಳಿಸಿಕೊಡಲಾಗುತ್ತದೆ. ಪ್ರಶ್ನೆಗಳು ಪಠ್ಯಪುಸ್ತಕದ ಪಠ್ಯಕ್ರಮವನ್ನು ಆಧರಿಸಿವೆ. ಆ ಕಾರಣದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.
ರುಪ್ಸಾ ಈ ಪರೀಕ್ಷೆಯನ್ನು ನಡೆಸುವಂತಿಲ್ಲ ವಿದ್ಯಾರ್ಥಿಗಳಿಗೆ ಸರಿಯಾದ ಪಠ್ಯಕ್ರಮವನ್ನು ನೀಡಿಲ್ಲ. ಮಾದರಿ ಪ್ರಶ್ನೆ ಪತ್ರಿಕೆ ಇಲ್ಲ ಎಂದು ದೂರು ಸಲ್ಲಿಸಿತ್ತು. ಇದಕ್ಕೆ ಏಕಸದಸ್ಯಪೀಟ ಕೊಟ್ಟ ತೀರ್ಪನ್ನು ಆಧರಿಸಿ ಮೊದಲಿಗೆ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ನಂತರ ಹೈಕೋರ್ಟ್ನ ಮುಂದೆ ಈ ವಿಷಯವನ್ನು ಇಡಲಾಗಿತ್ತು. ಅಲ್ಲಿ ಬಂದ ತೀರ್ಪಿನ ಪ್ರಕಾರ ಈ ಪರೀಕ್ಷೆಯನ್ನು ನಡೆಸಬೇಕು ಎಂದು ಸೂಚಿಸಲಾಯಿತು. ಅದರಂತೆ ಇಂದು ಪರೀಕ್ಷೆಯನ್ನು ನಡೆಸಲಾಗುತ್ತಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ