ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಈ ಆಡಳಿತಾವಧಿಯ ಕೊನೆಯ ಬಜೆಟ್ (Budget) ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ ಆಗಿರುವುದರಿಂದ ಬಜೆಟ್‌ನಲ್ಲಿ ಎಲ್ಲಾ ವರ್ಗದ ಜನರನ್ನು ತಲುಪಲು ಪ್ರಯತ್ನ (Effort) ಪಟ್ಟಿರುವ ಸಿಎಂ ಬೊಮ್ಮಾಯಿ, ಭರಪೂರ ಘೋಷಣೆಗಳನ್ನು ಮಾಡಿದ್ದಾರೆ. ಇದರ ಜೊತೆಜೊತೆಗೆ ಶೈಕ್ಷಣಿಕ ವಲಯಕ್ಕೂ ಭರ್ಜರಿ ಕೊಡುಗೆ ಸಿಕ್ಕಿದೆ.
ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಲು ಹಾಗೂ ಮೂಕ ಸೌಕರ್ಯಗಳಿರುವ ವಸತಿ ಶಾಲೆಗಳನ್ನು ನಿರ್ಮಾಣ ಮಾಡಲು ಬಜೆಟ್ ಬಿಡುಗಡೆ ಮಾಡಲಾಗಿದೆ. ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣವನ್ನು ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Budget 2023-24 Live: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ
1) ಕಳೆದ ವರ್ಷ 2,284 ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಪ್ರಸಕ್ತ ವರ್ಷದಲ್ಲಿ ಹೆಚ್ಚುವರಿ 1,230 ಕೊಠಡಿಗಳ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ
2) 2,777 ಹಳೆಯ ಮತ್ತು ಭಾರೀ ಮಳೆ ಹಾನಿಗೊಳಗಾದ ಕೊಠಡಿಗಳ ದುರಸ್ತಿ ಮಾಡಿಸಲಾಗುವುದು ಎಂದು ಹೇಳಿದ್ದಾರೆ.
3) ಹೆಚ್ಚಿನ ದಾಖಲಾತಿ ಹೊಂದಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
4) ಕಾಲೇಜು ಒಂದರಲ್ಲಿ 260 ಕೊಠಡಿಗಳ ನಿರ್ಮಾಣ ಮಾಡಲಾಗುತ್ತದೆ ಎಂಬ ಮಾಹಿತಿಯನ್ನೂ ಸಹ ನೀಡಿದ್ದಾರೆ.
ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಅಭಿವೃದ್ದಿ ಮಾಡಲಾಗುತ್ತದೆ ಎಂಬುದು ತಿಳಿದುಬಂದಿದೆ.
100 ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೆ ಕೊಂಡೊಯ್ಯುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ.
29 ಕಡೆಗಳಲ್ಲಿ ಅಬ್ಧುಲ್ ಕಲಾಂ ಶಾಲೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚುವರಿಯಾಗಿ 1230 ಕೊಠಡಿಗಳ ನಿರ್ಮಾಣವನ್ನು ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಕಸ್ತೂರ ಬಾ ಗಾಂಧಿ ವಸತಿ ಶಾಲೆಯಲ್ಲಿ ಹೈಟೆಕ್ ತಂತ್ರಜ್ಞಾನ
47 ವಸತಿ ಶಾಲೆಗಳ ದುರಸ್ತಿ ಮಾಡಿಲಾಗುವುದು ಎಂದು ಹೇಳಿದ್ದಾರೆ ಮತ್ತು ಆ ಎಲ್ಲಾ ಶಾಲಾ ಕೊಠಡಿಗಳನ್ನೂ ಸಹ ಸ್ಮಾರ್ಟ್ ಕ್ಲಾಸ್ರೂಂಗಳನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ