ಹಾವೇರಿಯಲ್ಲಿ ಇತ್ತೀಚೆಗಷ್ಟೇ ಒಂದು ಘಟನೆ ಜರುಗಿತ್ತು ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ (Hostel) ನಿಂದ ಹೊರಹಾಕಲಾಗಿತ್ತು ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ಡಿಸಿ ಆದೇಶದ ಮೇರೆಗೆ ವಿದ್ಯಾರ್ಥಿಗಳನ್ನು (Students) ಹೊರಹಾಕಲಾಗಿತ್ತು. ಆದರೆ ಅದೇ ಘಟನೆಯನ್ನು (Insident) ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯನವರು ಬಳ್ಳಾರಿ ಜಿಲ್ಲಾಧಿಕಾರಿಯನ್ನು (DC) ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ ವ್ಯಕ್ತಪಡಿಸಿದ್ದಾರೆ.
ನ್ಯಾಯ ಕೇಳಿ ಬಂದ 20 ಜನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಳ್ಳಾರಿ ಡಿಸಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಅದೇ ಘಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ಧರಾಮಯ್ಯನವರು ಬಳ್ಳಾರಿ ಜಿಲ್ಲಾಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಗುರುವಾರ ರಾತ್ರಿ ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕಿದ್ದ ಅವರ ಈ ರೀತಿ ವರ್ತನೆ ಹಲವರಿಗೆ ಸರಿಕಾಣಿಸಿಲ್ಲ. ವಿದ್ಯಾಭ್ಯಾಸ ಮಾಡಲು ಬಂದವರಿಗೆ ಊಟ, ಆರೋಗ್ಯ ಎರಡೂ ಕೂಡಾ ತುಂಬಾ ಮುಖ್ಯವಾಗಿರುತ್ತದೆ. ತಮ್ಮ ಹಕ್ಕನ್ನು ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಈ ರೀತಿ ಮಾಡಿದ್ದು ತಪ್ಪು ಎಂಬ ಮಾತು ಕೇಳಿಬರ್ತಿದೆ.
ಇದನ್ನೂ ಓದಿ: Animation Course: ಅನಿಮೇಷನ್ ಕೋರ್ಸ್ ಮಾಡಲು ಆಸಕ್ತಿ ಇದೆಯಾ? ಹಾಗಾದ್ರೆ ಈ ವಿಷಯ ತಿಳಿದುಕೊಳ್ಳಿ
ಚಿಕನ್ ಸರಿಯಿಲ್ಲ ಅಂತಾ ಪ್ರಶ್ನಿಸಿದ್ದ ವಿದ್ಯಾರ್ಥಿಗಳು ರಾತ್ರಿ ಚಿಕನ್ ಸಮೇತ ಅಧಿಕಾರಿಗಳ ಮನೆಗೆ ತೆರಳಿದ್ಧಾರೆ. ರಾತ್ರಿ ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಊಟ ಸರಿಯಿಲ್ಲ ಇದನ್ನು ಹೇಗೆ ತಿನ್ನೋದು ಎಂದು ಪ್ರಶ್ನೆ ಮಾಡಿದ್ದರು ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು.
ಡಿಸಿ ಸೂಚನೆ ಮೇರೆಗೆ ವಿದ್ಯಾರ್ಥಿಗಳನ್ನ ಹೊರ ಹಾಕಿದ ವಾರ್ಡನ್
ಜಿಲ್ಲಾಧಿಕಾರಿಗಳ ಮನೆಗೆ ತೆರಳಿದ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತಾ ಎಂಬ ಪ್ರಯತ್ನ ಮಾಡಿದ್ದೇ ತಪ್ಪಾಯ್ತು. ಯಾಕೆಂದರೆ ವಿದ್ಯಾರ್ಥಿಗಳು ಅಲ್ಲಿ ಹೋಗಿದ್ದಕ್ಕೆ ಅವರ ಹಾಸ್ಟೆಲ್ ಲೈಪ್ ಮುಕ್ತಾಯವಾಗುವ ಪರಿಸ್ಥಿತಿ ಎದುರಾಗಿ ಇನ್ನೂ ದೊಡ್ಡ ಸಮಸ್ಯೆಯಾಯ್ತು. ಡಿಸಿ ಸೂಚನೆ ಮೇರೆಗೆ ವಿದ್ಯಾರ್ಥಿಗಳನ್ನ ವಾರ್ಡ್ನ್ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿಯಾಗಿದೆ. ರಾತ್ರಿ 10 ಗಂಟೆಗೆ ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ. ಸಮಸ್ಯೆಯನ್ನು ತಮ್ಮ ಗಮನಕ್ಕೆ ತಂದು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ಡಿಸಿ ವಿದ್ಯಾರ್ಥಿಗಳನ್ನು ಶ್ಲಾಘಿಸಬೇಕಿತ್ತು ಆದರೆ ಅವರು ಈ ರೀತಿ ಮಾಡಿದ್ದು ತಪ್ಪು ಎಂದು ಹೇಳಿದ್ದಾರೆ.
ಡಿಸಿಯನ್ನು ಅಮಾನತು ಮಾಡುವಂತೆ ಆಗ್ರಹ
ಈ ಘಟನೆ ನಡೆದ ವಿಷಯ ತಿಳಿದ ಕೂಡಲೇ ಅವರನ್ನು ಅಮಾನತು ಮಾಡಬೇಕಿತ್ತು ಆದರೆ ಈ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ. ಅಧಿಕಾರಿಯನ್ನು ಅಮಾನತು ಮಾಡುವ ಬದಲು ವಿದ್ಯಾರ್ಥಿಗಳ ಬಳಿಯೇ ಕ್ಷಮೆಯಾಚಿಸುವಂತೆ ಶ್ರೀರಾಮಲು ಸೂಚಿಸಿದ್ದಾರೆ ಇದು ತಪ್ಪು ಎಂದು ಅವರು ಹೇಳಿದ್ದಾರೆ. ತಮ್ಮ ಸಮುದಾಯದ ವಿದ್ಯಾರ್ಥಿಗಳಿಗ ಹಾಸ್ಟೆಲ್‌ನಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲು ಸಾಧ್ಯವಾಗದ ಸಚಿವರು, ರಾಜ್ಯದ ಬಡ ಜನರಿಗೆ ಹೇಗೆ ನ್ಯಾಯ ಒದಗಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಡಿಸಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ವಾರ್ಡ್ನ್ ಇತರ ಎಲ್ಲ ಅಧಿಕಾರಿಗಳನ್ನು ಸರಕಾರ ಕೂಡಲೇ ಅಮಾನತುಗೊಳಿಸಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ