• ಹೋಂ
  • »
  • ನ್ಯೂಸ್
  • »
  • jobs
  • »
  • Scholarship: ಸಮಾಜ ಕಲ್ಯಾಣ ಇಲಾಖೆ ನೀಡುವ ಈ ಸ್ಕಾಲರ್​ ಶಿಪ್​ಗೆ ಅಪ್ಲೈ ಮಾಡಿ; 35,000 ವಿದ್ಯಾರ್ಥಿ ವೇತನ ಪಡೆಯಿರಿ

Scholarship: ಸಮಾಜ ಕಲ್ಯಾಣ ಇಲಾಖೆ ನೀಡುವ ಈ ಸ್ಕಾಲರ್​ ಶಿಪ್​ಗೆ ಅಪ್ಲೈ ಮಾಡಿ; 35,000 ವಿದ್ಯಾರ್ಥಿ ವೇತನ ಪಡೆಯಿರಿ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಈ ಸ್ಕಾಲರ್​ ಶಿಪ್​ ಬಗ್ಗೆ ನಿಮಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದರೆ ಖಂಡಿತ ನಾವು ಇಲ್ಲಿ ನೀಡಿರುವ ಲಿಂಕ್​ ಕ್ಲಿಕ್ ಮಾಡುವ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. 

  • News18 Kannada
  • 3-MIN READ
  • Last Updated :
  • Karnataka, India
  • Share this:

ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ನೀಡುವ ಆರ್ಥಿಕ (Economic) ಬೆಂಬಲವನ್ನು ವಿದ್ಯಾರ್ಥಿ ವೇತನ ಎಂದು ಕರೆಯಲಾಗುತ್ತದೆ. ಕರ್ನಾಟಕದಲ್ಲಿ ವ್ಯಾಸಂಗ (Study) ಮಾಡುತ್ತಿರುವ ಹಲವಾರು ವಿದ್ಯಾರ್ಥಿಗಳು ಪ್ರತಿ ವರ್ಷವೂ ಸರ್ಕಾರ ನೀಡುವ ವಿದ್ಯಾರ್ಥಿ ವೇತನದ (Scholarship) ಪ್ರಯೋಜನ ಪಡೆದುಕೊಳ್ಳುತ್ತಾರೆ. ಇದರಿಂದ ಅವರ ಶೈಕ್ಷಣಿಕ ಜೀವನದಲ್ಲಿ ಸುಧಾರಣೆಯಾಗಿದೆ. ಈ ವಿದ್ಯಾರ್ಥಿ ವೇತನಗಳ ಆಶಯವೂ ಅಷ್ಟೇ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿಯುವುದರ ಮೂಲಕ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದಾಗಿದೆ. 


2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಯಾವ ಸ್ಕಾಲರ್​ ಶಿಪ್​ ಮೂಲಕ ನೀವು ಹಣ ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಯಾರಿಗೆಲ್ಲ ಸಿಗುತ್ತೆ ಈ ಸ್ಕಾಲರ್​ಶಿಪ್?
ಈ ಸ್ಕಾಲರ್​ ಶಿಪ್​ ಬಗ್ಗೆ ನಿಮಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದರೆ ಖಂಡಿತ ನಾವು ಇಲ್ಲಿ ನೀಡಿರುವ ಲಿಂಕ್​ ಕ್ಲಿಕ್ ಮಾಡುವ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.  ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ 2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಇವರೂ ಅರ್ಜಿ ಸಲ್ಲಿಸಿ
2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: Sanchi Honnamma Scholarship: ಕರ್ನಾಟಕದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಿಗುತ್ತೆ ಈ ಸ್ಕಾಲರ್​ಶಿಪ್​! ನೀವೂ ಅಪ್ಲೈ ಮಾಡಿ


ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಲಿಂಕ್​ ಕ್ಲಿಕ್ ಮಾಡಿದರೆ ನಿಮಗೆ ಇಲ್ಲಿ ಕೆಲವು ಅಧಿಕೃತ ಮಾಹಿತಿಯನ್ನೂ ಸಹ ಪಡೆಯಬಹುದಾಗಿದೆ.


ಕೊನೆಯ ದಿನಾಂಕ ಹೀಗಿದೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಫೆಬ್ರವರಿ 28 ರಂದು ನಿಗದಿಪಡಿಸಲಾಗಿದೆ. ಕೊನೆ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿದರೆ ಮಾತ್ರ ಅರ್ಜಿಯನ್ನು ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭಿಸುತ್ತದೆ. ನೀವು ಆನ್​ಲೈನ್​ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇಲ್ಲಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ.




ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
1. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ.
2. ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
3. ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
4. ಆ ಪುಟದಲ್ಲಿ ಆನ್‌ಲೈನ್‌ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಇನ್ನೊಂದು ಪುಟ ತೆರೆಯುತ್ತದೆ
5. ಆ ಪುಟದಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಸಬ್ಮಿಟ್ ಮಾಡಿ.
6. ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.


ಅಗತ್ಯ ದಾಖಲೆಗಳು
ಅಂಕಪಟ್ಟಿ
ಆಧಾರ್‌ ಕಾರ್ಡ್‌
ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ
ಫೋಟೋ
ಇವಿಷ್ಟನ್ನು ನೀವು ಸಬ್​ಮಿಟ್​ ಮಾಡಲೇ ಬೇಕಾಗುತ್ತದೆ.


ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ. ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಏಕೆಂದರೆ ಇದೇ ಮೊದಲ ವರ್ಷವಾದ್ದರಿಂದ ತಪ್ಪಿಹೋಗಿರುವ ಸಾಧ್ಯತೆ ಇರುತ್ತದೆ.


ಕೋರ್ಸ್‌ಗೆ ಸಂಬಂಧಿಸಿದಂತೆ ಪ್ರೋತ್ಸಾಹಧನದ ವಿವರ
1. ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ - ರೂ.20,000/-.
2. ಪದವಿ ವಿದ್ಯಾರ್ಥಿಗಳಿಗೆ - ರೂ.25,000/-.
3. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ - ರೂ. 30,000/-.
4. ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ - ರೂ.35,000/-

First published: