ಸಿಇಟಿ ಪರೀಕ್ಷೆ (CET Exam) ದಿನವೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇರುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಈಗ ಅದಕ್ಕೆ ಪರಿಹಾರ ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ (Students) ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕೆಇಎ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ಟ್ರಾಫಿಕ್ (Traffic) ಕಿರಿಕಿರಿ ಆಗದಂತೆ ಸಂಚಾರಿ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ನಾಳೆಯಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳೆಲ್ಲರೂ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ನಾಳೆ ಪ್ರಮಾಣ ವಚನ ಹಿನ್ನೆಲೆ ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಆ ಕಾರಣಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಊಹಿಸಲಾಗಿತ್ತು. ಪತ್ರವನ್ನೂ ಸಹ ಬರೆದು ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ಬಂದಿದೆ.
ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಸಂಚಾರಿ ಪೋಲಿಸರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣ ಸುತ್ತಮುತ್ತ 20 ಪರೀಕ್ಷಾ ಕೇಂದ್ರಗಳಲ್ಲಿ ಮೂರು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರೆಲ್ಲರೂ ತಮ್ಮ ಹಾಲ್ ಟಿಕೆಟ್ ತೋರಿಸಿದ್ರೆ ವಿದ್ಯಾರ್ಥಿ, ಪೋಷಕರಿಗೆ ಪರೀಕ್ಷಾ ಕೇಂದ್ರ ಹೋಗಲು ಪೊಲೀಸರು ಸಹಾಯ ಮಾಡುತ್ತಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: PUC Revaluation Result: ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ; ಕಲಾ ವಿಭಾಗದಲ್ಲಿ ಕುಶ ನಾಯ್ಕ್ ರಾಜ್ಯಕ್ಕೆ ಪ್ರಥಮ
ಕ್ರೀಡಾಂಗಣದ ಮುಂದಿರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟಿಫನ್, ಊಟದ ವ್ಯವಸ್ಥೆ ಮಾಡಲಾಗಿದೆ. ಸೈಂಟ್ ಜೋಸೆಫ್ ಕಾಲೇಜ್ ನಲ್ಲಿ ಪರೀಕ್ಷೆ ಬರೆಯುತ್ತಿರುವ 564 ವಿದ್ಯಾರ್ಥಿಗಳು, ಪೋಷಕರಿಗೆ ಟಿಫನ್, ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಸಾಧ್ಯವಾದಷ್ಟು ಬೇಗ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಕೆಇಎ ನಿರ್ದೇಶಕಿ ರಮ್ಯ ಮನವಿ ಮಾಡಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಫೋನ್ ಮಾಡಿ ಮನವಿ ಮಾಡುತ್ತಿರುವ ಕೆಇಎ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪದಂತೆ ಮುನ್ನೆಚ್ಚರಿಕೆ ವಹಿಸುತ್ತಿದೆ.
ವೃತ್ತಿಪರ ಕೋರ್ಸ್ ಗಳಿಗೆ ನಡೆಯುವ ಸಿಇಟಿ ಪರೀಕ್ಷೆ
ವೃತ್ತಿಪರ ಕೋರ್ಸ್ ಗಳಿಗೆ ನಡೆಯುವ ಸಿಇಟಿ ಪರೀಕ್ಷೆ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ, ಯೋಗ ಹಾಗೂ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಗಳಿಗೆ ನಡೆಯುವ ಪ್ರವೇಶಾತಿ ಪರೀಕ್ಷೆ ಇದಾಗಿದ್ದು ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಜರುಗುವ ಸಿಇಟಿ ಪರೀಕ್ಷೆ ಈ ಬಾರಿ 2 ಲಕ್ಷದ 61 ಸಾವಿರದ 610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಹಾಜರಾಗಲಿದ್ದಾರೆ.
ಮುಖ್ಯ ಸೂಚನೆ ಹೀಗಿದೆ
ನಾಳೆ ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಗ್ಗೆ 8.30 ರ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಸಂಚಾರಿ ಇಲಾಖೆ ಮನವಿ ಮಾಡಿದೆ. ವಿದ್ಯಾರ್ಥಿಗಳು ಇದನ್ನು ಮುಖ್ಯವಾಗಿ ಗಮನಿಸಬೇಕಾಗುತ್ತದೆ.
ಈ ಹಿಂದೆ ಏನೆಲ್ಲಾ ಸಮಸ್ಯೆಯಾಗಲಿದೆ ಎಂದು ತಿಳಿಸಲಾಗಿತ್ತು
ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತಟ್ಟಲಿದೆ ಟ್ರಾಫಿಕ್
ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಪತ್ರ ಬರೆದ ಕೆಇಎ ಇದಕ್ಕೆ ಏನಾದರೂ ಪರ್ಯಾಯ ವ್ಯವಸ್ಥೆಯನ್ನು ಮಾಡುವಂತೆ ಕೋರಿಕೊಂಡಿದೆ.
ಟ್ರಾಫಿಕ್ ಸಮಸ್ಯೆ ಯಾವ ಭಾಗದಲ್ಲಿ ಆಗಬಹುದು ಎಂಬುದನ್ನು ಮನಗಂಡು
ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮಕ್ಕೆ ಮನವಿ ಮಾಡಿಕೊಂಡಿದೆ.
12.30ಕ್ಕೆ ಜರುಗುವ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕೋರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ