ರಾಜ್ಯದ ಎಲ್ಲೆಡೆ ಪರೀಕ್ಷೆಗಳು (Exams) ನಡೆಯುತ್ತದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಕಟ್ಟು ನಿಟ್ಟಿನ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಆದರೂ ಸಹ ಕೆಲವು ಲೋಪ ದೋಷಗಳು ಕಂಡು ಬಂದಿದೆ ಎಂದೇ ಹೇಳಬಹುದು. ಎರಡು ಕಡೆ ವಿದ್ಯಾರ್ಥಿಗಳು (Students) ಪಾಪಿ ಮಾಡಿರುವ ವಿಚಾರ ಹೊರಬಿದ್ದಿದೆ. ಎಲ್ಲೆಲ್ಲಿ ಏನಾಗಿದೆ ಎಂಬ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ ಗಮನಿಸಿ. ಈ ಸುದ್ದಿ ಸಂಪೂರ್ಣಾವಾಗಿ ಓದಿ (Read).
ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗೆ ಸರಿಯಾದ ರೀತಿಯಲ್ಲಿ ತಯಾರಿ ನಡೆಸಿ ಅಭ್ಯಾಸ ಮಾಡಿ ಪರೀಕ್ಷೆ ಬರೆಯುತ್ತಿದ್ದಾರೆ. ಅಂದುಕೊಂಡಷ್ಟು ಅಂಕ ಪಡೆಯಲು ಹರ ಸಾಹಸ ಪಡುತ್ತಿದ್ದಾರೆ. ಇದರ ನಡುವೆ ಇನ್ನೂ ಕೆಲವು ವಿದ್ಯಾರ್ಥಿಗಳು ಮೋಸದಿಂದ ಪಾಸಾಗಲು ಪ್ರಯತ್ಮ ಪಟ್ಟ ಘಟನೆ ಜರುಗಿದೆ. ಅದೂ ಕೂಡ ಬೆಳಗಾವಿ ಹಾಗೂ ಯಾದಗಿರಿಯಲ್ಲಿ.
ಇದನ್ನೂ ಓದಿ: 2nd PUC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ
ಬೆಳಗಾವಿ ಹಾಗೂ ಯಾದಗಿರಿಯಲ್ಲಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, 1,109 ಪರೀಕ್ಷಾ ಕೇಂದ್ರಗಳಲ್ಲಿ 7,26,196 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನವೇ ಇಬ್ಬರು ಡಿಬಾರ್ ಆಗಿದ್ದಾರೆ.
ಪರೀಕ್ಷೆ ಎಂಬುದು ಭವಿಷ್ಯದ ಒಂದು ಪ್ರಮುಖ ಹಂತವಾಗಿರುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಏನು ಮಾಡಬೇಕು ಎಂಬ ನಿರ್ಧಾರವನ್ನು ತಾವೂ ಸ್ವತಃ ತೆಗೆದುಕೊಳ್ಳುವಷ್ಟು ಸಮರ್ಥರಾಗಿರುತ್ತಾರೆ. ಆದರೂ ಸಹ ಈ ರೀತಿ ವರ್ತನೆ ತೋರಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ ಎಂಬುದೇ ಬೇಸರದ ಸಂಗತಿಯಾಗಿದೆ.
ಕಣ್ಗಾವಲು ತಪ್ಪಿಸುವ ಆಲೋಚನೆ ಬೇಡ
ಮಾ.29ರವರೆಗೆ ನಿತ್ಯ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ನಿಷೇಧ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಆದರೂ ಸಹ ಯಾವ ಭಯವಿಲ್ಲದೆ ಪರೀಕ್ಷಾ ಕೊಠಡಿಗೆ ಕಾಪಿ ಚೀಟಿ ತರುತ್ತಾರೆ ಎಂದರೆ ಏನರ್ಥ?
ಬೀದರ್ನಲ್ಲಿ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳು
ಬೀದರ್ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ 10-15 ಕ್ಕೆ ಆರಂಭವಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ಬಿಗಿ ಭದ್ರತೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಹೊರಗೆ ಬ್ಯಾಗ್ ಇಟ್ಟು ಒಳಗೆ ತೆರಳಿದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ಜಿಲ್ಲೆಯಾದ್ಯಂತ ಪ್ರಥಮ ಭಾಷೆ ಪರೀಕ್ಷೆ ನಡೆಯುತ್ತಿದೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಗೆ ತಪಾಸಣೆ ಮಾಡಿ ಬಿಡ್ತಿರುವ ಸಿಬಂದಿ ಭಿಗಿ ಭದ್ರತೆ ಕೈಗೊಂಡಿದ್ದಾರೆ.
ರಾಜ್ಯದ ಒಟ್ಟು ಪಿಯು ವಿದ್ಯಾರ್ಥಿಗಳ ಸಂಖ್ಯೆ
ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳಾಗಿದ್ದಾರೆ. ಪರೀಕ್ಷಾ ಕಾರ್ಯಕ್ಕೆ 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2,373 ವಿಶೇಷ ಜಾಗೃತ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ