Union Budget 2023: ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಆರ್ಥಿಕತೆಯ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಡಿಜಿಟಲ್ ಲೈಬ್ರರಿ ಸ್ಥಾಪನೆ
ಆ ಮಹತ್ತರ ಘೋಷಣೆಗಳಲ್ಲಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆಯೂ ಪ್ರಮುಖವಾಗಿದೆ. ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ನ್ಯಾಷನಲ್ ಡಿಜಿಟಲ್ ಲೈಬ್ರರಿಗಳ ಸ್ಥಾಪನೆ ಮಾಡುವುದಾಗಿ ಬಜೆಟ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ರಾಷ್ಟ್ರೀಯ ಪುಸ್ತಕ ಟ್ರಸ್ಟ್ನ್ನು ನಿರ್ಮಿಸಲಾಗುತ್ತಿದೆ, ಮಕ್ಕಳ ಪುಸ್ತಕ ಟ್ರಸ್ಟ್ನ್ನು ಪ್ರಾದೇಶಿಕ ಭಾಷೆಗಳು ಮತ್ತು ಇಂಗ್ಲಿಷ್‌ನಲ್ಲಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಬಜೆಟ್ ಕುರಿತಾದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮಕ್ಕಳು ಮತ್ತು ಹದಿಹರೆಯದವರಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು. ಇಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆ ಇರುತ್ತದೆ. ಪಂಚಾಯತ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಸೂಚನೆ ನೀಡಲಾಗುತ್ತದೆ. NGO ಗಳ ಸಹಯೋಗವೂ ಇದರ ಭಾಗವಾಗಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದರು.
ರಾಜ್ಯಕ್ಕೆ ಬಂಪರ್ ಕೊಡುಗೆ:
ಕರ್ನಾಟಕಕ್ಕೆ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ, ಭದ್ರಾ ಮೇಲ್ದಂಡೆ ಯೊಜನೆಗೆ 5,300 ಕೋಟಿ ಅನುದಾನವನ್ನು. ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ
ರಾಜ್ಯ ಸರ್ಕಾರಗಳಿಗೆ ಹಣಕಾಸು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರಾಜ್ಯಗಳ ರಸ್ತೆ, ರೈಲು, ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಬಡ್ಡಿ ರಹಿತ ಸಾಲ ಸೌಲಭ್ಯ ಮುಂದುವರಿಕೆ ಮಾಡುವುದಾಗಿ ಸಹ ಘೋಷಿಸಿದ್ದಾರೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ ಮುಂದುವರಿಯುತ್ತದೆ ಎಂದು ಬಜೆಟ್ ಭಾಷಣದಲ್ಲಿ ಸೀತಾರಾಮನ್ ಘೋಷಿಸಿದ್ದಾರೆ.
ಇದನ್ನೂ ಓದಿ: Union Budget 2023: 5ನೇ ಸ್ಥಾನಕ್ಕೆ ಜಿಗಿದ ಭಾರತದ ಆರ್ಥಿಕತೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಸಚಿವೆ
ದೇಶದಲ್ಲಿ ಹೊಸದಾಗಿ 50 ಏರ್ಪೋರ್ಟ್ಗಳ ಅಭಿವೃದ್ಧಿಗೆ ಅನುಮೋದನೆ-ಅನುದಾನ ನೀಡಲಾಗುವುದು. ಮ್ಯಾನ್ ಹೋಲ್ಗಳಲ್ಲಿ ಮಾನವರು ಇಳಿಯದಂತೆ ಯಂತ್ರಗಳ ಬಳಕೆ ಹೆಚ್ಚಿಸಲಾಗುವುದು. ಸರ್ಕಾರಿ ನೌಕರರ ಕೌಶಲಾಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಆರೋಗ್ಯ, ಕೃಷಿ, ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ದಿಮತ್ತೆಯ ಬಳಕೆ ಹೆಚ್ಚಿಸಲಾಗುವುದು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕೇಂದ್ರಗಳನ್ನು ಸ್ಥಾಪಿಸಿ ವಿವಿಧ ಕ್ಷೇತ್ರಗಳಲ್ಲಿ ಬಳಕೆಯನ್ನು ಉತ್ತೇಜಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ವತಂತ್ರ ಭಾರತದಲ್ಲಿ ಸತತ ಐದು ಬಜೆಟ್‌ಗಳನ್ನು ಮಂಡಿಸಿದ ಆರನೇ ಸಚಿವರಾಗಿದ್ದಾರೆ. ಅರುಣ್ ಜೇಟ್ಲಿ, ಪಿ ಚಿದಂಬರಂ, ಯಶವಂತ್ ಸಿನ್ಹಾ, ಮನಮೋಹನ್ ಸಿಂಗ್ ಮತ್ತು ಮೊರಾರ್ಜಿ ದೇಸಾಯಿ ಈ ಲಿಸ್ಟ್ನಲ್ಲಿ ಮೊದಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ