ಈ ಬಾರಿ ಯುನಿಯನ್ ಬಜೆಟ್‌ನಲ್ಲಿ ಶಿಕ್ಷಣಕ್ಕೂ ಸಿಕ್ಕಿದೆ ಪ್ರಾಮುಖ್ಯತೆ. ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ (Education Sector) ನೀಡಲಾಗಿದೆ. ಅಷ್ಟೇ ಅಲ್ಲ ಬುಡಕಟ್ಟು ವಿದ್ಯಾರ್ಥಿಗಳಿಗೆ (Students) ಸಹಾಯವಾಗುವಂತೆ ಶಿಕ್ಷಣಕ್ಕೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಏಕಲವ್ಯ ಶಾಲೆಗಳನ್ನು (Ekalavya Schools) ನಿರ್ಮಿಸಲು ಮುಂದಾಗಿದೆ. ಕಳೆದ ಯೂನಿಯನ್ ಬಜೆಟ್‌ನಲ್ಲಿ ಡಿಜಿಟಲ್ ವಿಶ್ವವಿದ್ಯಾನಿಲಯ (Digital University), ಬಹುಭಾಷಾ ಇ-ವಿಷಯ ಮತ್ತು PM eVidya ಯೋಜನೆ ಘೋಷಣೆಗೆ ಬೆಂಬಲ ನೀಡಲಾಗಿತ್ತು. ಆದರೆ ಈ ಬಾರಿ 157 ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಹಾಯವಾಲೆಂದು ಲ್ಯಾಬ್ಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣವನ್ನು ಹೆಚ್ಚಿಸಲು, 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಮತ್ತು ವೈದ್ಯಕೀಯ ಉಪಕರಣಗಳ ತರಬೇತಿಗಾಗಿ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಮಂಡಿಸಿದ್ದಾರೆ.
ಮುಂದಿನ 3 ವರ್ಷಗಳಲ್ಲಿ ಕೇಂದ್ರವು 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಮಾದರಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭಾರಿ ಪ್ರಮಾಣದ ಕೊಡುಗೆ ಸಿಕ್ಕಿದೆ. ಬುಡಕಟ್ಟು ವಿದ್ಯಾರ್ಥಿಗಳ ಕಲಿಕೆಗೂ ಈ ಬಾರಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
ಇದನ್ನೂ ಓದಿ: Budget 2023 LIVE: 2070ರ ವೇಳೆಗೆ ಭಾರತ ಕಾರ್ಬನ್ ಫ್ರೀ, ಗುಜುರಿ ಸೇರಲಿವೆ ಹಳೆ ವಾಹನ
ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಆರ್ಥಿಕತೆಯ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಅದೇ ವೇಳೆ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುವ ಕೊಡುಗೆಯ ಬಗ್ಗೆ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ