• Home
  • »
  • News
  • »
  • jobs
  • »
  • Higher Education: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು - ಅಶ್ವಥ್​ ನಾರಾಯಣ್​

Higher Education: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು - ಅಶ್ವಥ್​ ನಾರಾಯಣ್​

ಅಶ್ವಥ್​ ನಾರಾಯಣ್​

ಅಶ್ವಥ್​ ನಾರಾಯಣ್​

ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಒತ್ತಿ ಹೇಳಿದ ಅವರು, ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಸುಧಾರಿಸಲು ಸರ್ಕಾರದೊಂದಿಗೆ ಸಮನ್ವಯದಿಂದ ಕೆಲಸ ಮಾಡಲು ತಂಡವಾಗಿ ಕೆಲಸ ಮಾಡಲು ಅಶ್ವಥ್​ ನಾರಾಯಣ್ ಒತ್ತಾಯಿಸಿದರು.

  • Share this:

ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು (Higher Education) ಮತ್ತಷ್ಟು ಬಲಪಡಿಸಲು ವಿಧಾನಮಂಡಲದಲ್ಲಿ ಹಲವಾರು ಅಗತ್ಯ ಕ್ರಮವನ್ನು ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ, ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ (State Government) ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡವುದಾಗಿ ಉನ್ನತ ಶಿಕ್ಷಣ (Education), ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.


ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರೊಂದಿಗೆ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಅಶ್ವತ್ಥನಾರಾಯಣ, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಅದನ್ನು ಇನ್ನಷ್ಟು ಶಕ್ತಿಯುತಗೊಳಿಸುವ ವಿಷಯದ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ, ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ.


ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಮಹತ್ವ


ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರೊಂದಿಗೆ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಅಶ್ವತ್ಥನಾರಾಯಣ, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ವಿಧೇಯಕವನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು. ದೇಶದ ಬೆಳವಣಿಗೆಗೆ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ಅರಿತು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೊಳಿಸುವಲ್ಲಿ ರಾಜ್ಯವು ಪ್ರವರ್ತಕವಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ತಮಿಳುನಾಡಿನ ಶಾಲಾ ಮಕ್ಕಳಲ್ಲಿ ಕನ್ನಡ ಪ್ರೀತಿ, ಇವರು ಕನ್ನಡ ಶಾಲೆಗೇ ಹೋಗೋದು


ಖಾಲಿ ಇರುವ ಹುದ್ದೆಗಳ ಭರ್ತಿ


ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಪ್ರಸ್ತಾಪಿಸಿದ ಸಚಿವರು ರಾಜ್ಯಾದ್ಯಂತ ಇರುವ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಮತ್ತು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದರು. ರಾಜ್ಯದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಸೌಲಭ್ಯಗಳನ್ನು ಒದಗಿಸಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.


ಉನ್ನತ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ


ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗೆ ಏನನ್ನಾದರೂ ಮರಳಿ ನೀಡುವ ಕುರಿತು ಸಚಿವರು ಮಾತಿನಲ್ಲಿ ಪ್ರಸ್ತಾಪಿಸಿದರು. ಇದು ಉನ್ನತ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಬಹಳ ಸಹಾಯವಾಗುತ್ತದೆ ಎಂದು ತಿಳಿಸಿದರು. ಉನ್ನತ ಶಿಕ್ಷಣದ ಪ್ರಸ್ತಾವಿತ ಹೊಸ ಮಸೂದೆಯ ಕುರಿತು ಅವರು ಇದು ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ವ್ಯವಹಾರಗಳಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು. ಶೈಕ್ಷಣಿಕ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅಧಿಕಾರ ವಿಕೇಂದ್ರೀಕರಣದ ಉದ್ದೇಶವಾಗಿದೆ ಎಂದು ಅವರು ಹೇಳಿದರು.


ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬೇಡಿಕೆ ಪೂರೈಕೆ


ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಒತ್ತಿ ಹೇಳಿದ ಅವರು, ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಸುಧಾರಿಸಲು ಸರ್ಕಾರದೊಂದಿಗೆ ಸಮನ್ವಯದಿಂದ ಕೆಲಸ ಮಾಡಲು ತಂಡವಾಗಿ ಕೆಲಸ ಮಾಡಲು ಒತ್ತಾಯಿಸಿದರು. ಪ್ರತಿ ಜಿಲ್ಲೆಯಲ್ಲೂ ವಿಶ್ವವಿದ್ಯಾನಿಲಯ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ಡಾ.ಅಶ್ವಥ್ ನಾರಾಯಣ್, ಜ್ಞಾನ ಆಯೋಗ ಹಾಗೂ ತಜ್ಞರ ಶಿಫಾರಸ್ಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.


ಕರ್ನಾಟಕ ವಿಶ್ವವಿದ್ಯಾಲಯದ ಉಪಕುಲಪತಿ ಕೆ.ಬಿ.ಗುಡಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉನ್ನತ ಶಿಕ್ಷಣ ನಿರ್ದೇಶಕ ಎಸ್.ಎಂ.ಶಿವಪ್ರಸಾದ್, ಸಿಂಡಿಕೇಟ್ ಸದಸ್ಯರಾದ ಕಲ್ಮೇಶ ಹಾವೇರಿಪೇಟೆ, ಎಸ್.ಸಿ.ಚಿಕ್ಕನಗೌಡ್ರ, ಸುಧೀಂದ್ರ ದೇಶಪಾಂಡೆ, ಜಯಪ್ರಕಾಶ ಬಾದಾಮಿ, ಪ್ರಕಾಶ ರಾಯ್ಕರ್, ಸಂದೀಪ್ ಬೂದಿಹಾಳ್, ಹಂಸವೇಣಿ, ಹಣಕಾಸು ಅಧಿಕಾರಿ ಸುರೇಶ್, ರಿಜಿಸ್ಟ್ರಾರ್ ಕೃಷ್ಣಮೂರ್ತಿ, ಮಾಜಿ ಎಂಎಲ್ಸಿ ಅರುಣ್ ಶಹಾಪುರ ಇನ್ನಿತರರು ಉಪಸ್ಥಿತರಿದ್ದರು.

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು