• Home
  • »
  • News
  • »
  • jobs
  • »
  • EPFO Recruitment: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಬಿಇ ಆದವರಿಗೆ ಅವಕಾಶ

EPFO Recruitment: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಬಿಇ ಆದವರಿಗೆ ಅವಕಾಶ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 14 ಆಗಿದೆ.

  • Share this:

    ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (Employees Provident Fund Organisation) 57 ಹುದ್ದೆಗಳ ಅಧಿಸೂಚನೆಗೆ ಪ್ರಕಟಣೆ ಹೊರಡಿಸಲಾಗಿದೆ. ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗೆ ಇಪಿಎಫ್​ಒ ಸಂಸ್ಥೆ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 14 ಆಗಿದೆ.


    ಮೇಲ್ಕಂಡ ಹುದ್ದೆಗಳನ್ನು ಡೆಪ್ಯೂಟೆಶನ್​ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಕೆಳಗಿನಂತೆ ಇದೆ.


    ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)
    ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್
    ಹುದ್ದೆಗಳ ಸಂಖ್ಯೆ: 57
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 8700-39100ರೂ  ಪ್ರತಿ ತಿಂಗಳು


    ಹುದ್ದೆ ವಿವರ ( Job Details)

    ಹುದ್ದೆಹುದ್ದೆ ಸಂಖ್ಯೆವೇತನ
    ಮುಖ್ಯ ಇಂಜಿನಿಯರ್1ಲೆವೆಲ್​ 11 ಮ್ಯಾಟ್ರಿಕ್ಸ್ ಅನ್ವಯ
    ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್)115600-39100 ರೂ
    ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್)115600-39100 ರೂ
    ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್)1815600-39100 ರೂ
    ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್)315600-39100 ರೂ
    ಜೂನಿಯರ್ ಇಂಜಿನಿಯರ್ (ಸಿವಿಲ್)329300-34800 ರೂ
    ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)19300-34800 ರೂ

    ವಿದ್ಯಾರ್ಹತೆ (Education Qualification):  
    ಮುಖ್ಯ ಎಂಜಿನಿಯರ್: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
    ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಸಿವಿಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
    ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಇಪಿಎಫ್‌ಒ ನೇಮಕಾತಿ ನಿಯಮಗಳ ಪ್ರಕಾರ
    ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ


    ಇದನ್ನು ಓದಿ: ಬೆಂಗಳೂರು ಕಾಫಿ ಬೋರ್ಡ್​ನಲ್ಲಿದೆ ಕೆಲಸ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ


    ವಯಸ್ಸಿನ ಮಿತಿ (Age Limit): ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.


    ವಯೋಮಿತಿ ಸಡಿಲಿಕೆ (Age Exemption):
    ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನಿಯಮಗಳ ಪ್ರಕಾರ


    ಆಯ್ಕೆ ಪ್ರಕ್ರಿಯೆ (Selection Process)
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು (Important Date):
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 14, 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು (Important Link)
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: epfindia.gov.in


    ಇದನ್ನು ಓದಿ: ಐಟಿಐ, ಎಸ್​​ಎಸ್​ಎಲ್​ಸಿ ಪಾಸಾದವರಿಗೆ ಉದ್ಯೋಗ; ಇಲ್ಲಿದೆ ಸಂಪೂರ್ಣ ಮಾಹಿತಿ


    ಅರ್ಜಿ ಸಲ್ಲಿಕೆ ವಿಧಾನ (How To Apply)


    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.


    ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.


    ಮೋಹಿತ್ ಕುಮಾರ್ ಶೇಖರ್, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು (HRM), ಭವಿಷ್ಯ ನಿಧಿ ಭವನ, 14 ಭಿಕೈಜಿಕರ್ನಾ ಪ್ಲೇಸ್, ನವದೆಹಲಿ - 110066

    Published by:Seema R
    First published: