ESIC Kalaburgi Recruitment 2021: ನೌಕರರ ರಾಜ್ಯ ವಿಮಾ ನಿಗಮ(Employees State Insurance Corporation- ESIC) ಕಲಬುರ್ಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್(Assistant Professor & Associate Professor)ಹುದ್ದೆಗಳು ಖಾಲಿ ಇದ್ದು, ಎಂಬಿಬಿಎಸ್(MBBS), ಪಿಎಚ್.ಡಿ(Ph. D), ಎಂಎಸ್(MS), ಎಂಡಿ(MD) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇರ ಸಂದರ್ಶನದ(Walk-in-Interview) ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಡಿಸೆಂಬರ್ 3ರಂದು ನೇರ ಸಂದರ್ಶನ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಸಂದರ್ಶನಕ್ಕೆ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ನೌಕರರ ರಾಜ್ಯ ವಿಮಾ ನಿಗಮ |
ಹುದ್ದೆಯ ಹೆಸರು |
ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ |
ಒಟ್ಟು ಹುದ್ದೆಗಳು |
31 |
ವಿದ್ಯಾರ್ಹತೆ |
ಎಂಬಿಬಿಎಸ್, ಪಿಎಚ್.ಡಿ, ಎಂಎಸ್, ಎಂಡಿ |
ಉದ್ಯೋಗದ ಸ್ಥಳ |
ಕಲಬುರ್ಗಿ |
ವೇತನ |
ಮಾಸಿಕ ₹ 92,000-1,06,000 |
ಆಯ್ಕೆ ಪ್ರಕ್ರಿಯೆ |
ಸಂದರ್ಶನ |
ಸಂದರ್ಶನದ ದಿನಾಂಕ |
03/12/2021 |
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ದಿನಾಂಕ: 22/11/2021
ಸಂದರ್ಶನ ನಡೆಯುವ ದಿನಾಂಕ: 03/12/2021
ಇದನ್ನೂ ಓದಿ: CCL Recruitment 2021: 10th, 12th, ITI ಪಾಸಾದವರಿಗೆ ಸೆಂಟ್ರಲ್ ಕೋಲ್ಫೀಲ್ಡ್ಸ್ನಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ
ಹುದ್ದೆಯ ಹೆಸರು:
ಅಸಿಸ್ಟೆಂಟ್ ಪ್ರೊಫೆಸರ್- 23
ಅಸೋಸಿಯೇಟ್ ಪ್ರೊಫೆಸರ್-08
ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್, ಪಿಎಚ್.ಡಿ, ಎಂಎಸ್, ಎಂಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 69 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರ್ಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,06,000
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 92,000
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: KMC Recruitment 2021: ತಿಂಗಳಿಗೆ ₹ 60,000 ಸಂಬಳ, MBBS ಪದವೀಧರರು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಸಂದರ್ಶನ ನಡೆಯುವ ಸ್ಥಳ
ESIC ಮೆಡಿಕಲ್ ಕಾಲೇಜು & ಆಸ್ಪತ್ರೆ
ಕಲಬುರ್ಗಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ