FACT Recruitment 2021: ಫರ್ಟಿಲೈಸರ್ಸ್​ & ಕೆಮಿಕಲ್ಸ್​ ಟ್ರಾವಂಕೂರ್​​ನಲ್ಲಿ ಅಪ್ರೆಂಟಿಸ್​ ಹುದ್ದೆಗಳು ಖಾಲಿ; ITI ಆದವರು ಅರ್ಜಿ ಸಲ್ಲಿಸಿ

ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

FACT

FACT

  • Share this:
FACT Recruitment 2021: ಫರ್ಟಿಲೈಸರ್ಸ್​ & ಕೆಮಿಕಲ್ಸ್​ ಟ್ರಾವಂಕೂರ್ (The Fertilizers and Chemicals Travancore) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 98 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಐಟಿಐ(ITI) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ FACTನ ಅಧಿಕೃತ ವೆಬ್​ಸೈಟ್​ www.fact.co.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಫರ್ಟಿಲೈಸರ್ಸ್​ & ಕೆಮಿಕಲ್ಸ್​ ಟ್ರಾವಂಕೂರ್
ಹುದ್ದೆಯ ಹೆಸರುಅಪ್ರೆಂಟಿಸ್
ಒಟ್ಟು ಹುದ್ದೆಗಳು98
ವಿದ್ಯಾರ್ಹತೆಐಟಿಐ
ಉದ್ಯೋಗದ ಸ್ಥಳಎರ್ನಾಕುಲಂ
ವೇತನಮಾಸಿಕ ₹ 7,000
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/12/2021

ಇದನ್ನೂ ಓದಿ: BECIL Recruitment 2021: ತಿಂಗಳಿಗೆ ₹ 35,000 ಸಂಬಳ; LLB ಪಾಸಾದವರಿಗೆ ಬಂಪರ್ ಉದ್ಯೋಗ

ವಿದ್ಯಾರ್ಹತೆ:

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​/ ಸಂಸ್ಥೆಯಿಂದ ಐಟಿಐ ಅಥವಾ ಐಟಿಸಿ ಪಾಸಾಗಿರಬೇಕು.

ವಯೋಮಿತಿ:

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 23 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೇರಳದ ಎರ್ನಾಕುಲಂನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: NFL Recruitment 2021: ನ್ಯಾಷನಲ್ ಫರ್ಟಿಲೈಸರ್ಸ್​ ಲಿಮಿಟೆಡ್​ನಲ್ಲಿ ಪದವಿ ಆದವರಿಗೆ ಉದ್ಯೋಗ

ವೇತನ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 7000 ವೇತನ ನೀಡಲಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: