FACT Recruitment 2022: ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್(Fertilizers and Chemicals Travancore Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಡೈರೆಕ್ಟರ್(Director) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ fact.co.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ |
ಹುದ್ದೆಯ ಹೆಸರು |
ಡೈರೆಕ್ಟರ್ |
ವಿದ್ಯಾರ್ಹತೆ |
ಎಂಜಿನಿಯರಿಂಗ್, ಎಂಬಿಎ, ಸ್ನಾತಕೋತ್ತರ ಪದವಿ |
ಉದ್ಯೋಗದ ಸ್ಥಳ |
ನವದೆಹಲಿ |
ವೇತನ |
ಮಾಸಿಕ ₹ 75,000-1,00,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
06/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
17/03/2022 |
ವಿದ್ಯಾರ್ಹತೆ:
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಎಂಜಿನಿಯರಿಂಗ್, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ:KPSC ನೇಮಕಾತಿ: 150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ
ಅನುಭವ:
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೊಡ್ಡ ಸಂಸ್ಥೆಯಲ್ಲಿ ನಿರ್ವಹಣೆಯ ಹಿರಿಯ ಮಟ್ಟದಲ್ಲಿ ತಾಂತ್ರಿಕ/ಕಾರ್ಯಾಚರಣೆಯ ಅನುಭವವನ್ನು ಹೊಂದಿರಬೇಕು. ಅದರಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ ಐದು ವರ್ಷಗಳು ಪ್ರಮುಖ ರಸಗೊಬ್ಬರಗಳು/ರಾಸಾಯನಿಕಗಳು/ಪೆಟ್ರೋಕೆಮಿಕಲ್ಸ್ ವಲಯದಲ್ಲಿ ಕೆಲಸ ಮಾಡಿರಬೇಕು.
ವಯೋಮಿತಿ:
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 18, 2022ಕ್ಕೆ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Karnataka Jobs: KAPLನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ, ತಿಂಗಳಿಗೆ ₹ 61,000 ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಫರ್ಟಿಲೈಜರ್ಸ್ & ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
fact.co.in ಗೆ ಭೇಟಿ ನೀಡಬೇಕು. ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಕೆಳಕಂಡ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಕಳುಹಿಸಬೇಕು.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಶ್ರೀಮತಿ ಕಿಂಬುವಾಂಗ್ ಕಿಪ್ಜೆನ್ ಕಾರ್ಯದರ್ಶಿ
ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿ
ಸಾರ್ವಜನಿಕ ಉದ್ಯಮಗಳ ಭವನ
ಬ್ಲಾಕ್ ಸಂಖ್ಯೆ 14
CGO ಕಾಂಪ್ಲೆಕ್ಸ್
ಲೋಧಿ ರಸ್ತೆ
ನವದೆಹಲಿ - 110003
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ