ದಕ್ಷಿಣ ಕನ್ನಡ ಜಿಲ್ಲೆ(Dakshina Kannada District) ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಥಳೀಯ ಸಂಪನ್ಮೂಲ ವ್ಯಕ್ತಿ (Local Resource Person-LRP) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ರೈತ ಮಕ್ಕಳಾದ ಯುವಕ/ಯುವತಿಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನವರಿ 30, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ |
ಹುದ್ದೆ | ಸ್ಥಳೀಯ ಸಂಪನ್ಮೂಲ ವ್ಯಕ್ತಿ |
ಒಟ್ಟು ಹುದ್ದೆ | 50 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 30,000 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 30, 2023 |
ಇದನ್ನೂ ಓದಿ: Bengaluru Jobs: ಬೆಂಗಳೂರಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 30 ಸಾವಿರ ಸಂಬಳ
ವಿದ್ಯಾರ್ಹತೆ:
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಕಡ್ಡಾಯವಾಗಿ ದ್ವಿಚಕ್ರ ವಾಹನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
ವಯೋಮಿತಿ:
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 35 ವರ್ಷದೊಳಗಿರಬೇಕು. ರೈತ ಮಕ್ಕಳಾದ ಯುವಕ/ಯುವತಿಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವೇತನ:
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಆಯ್ಕೆಯಾಗುವ ವ್ಯಕ್ತಿಗೆ ಮಾಸಿಕ ₹ 15,000 ಸಂಬಳದ ಜೊತೆಗೆ ₹ 10,000 ಮತ್ತು 5,000 ಭತ್ಯೆ ನೀಡಲಾಗುತ್ತದೆ.
ಇದನ್ನೂ ಓದಿ: KMF ನೇರ ನೇಮಕಾತಿ- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- SSLC ಪಾಸಾದವರೂ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು 500 ರೂ. ಡಿಮ್ಯಾಂಡ್ ಡ್ರಾಫ್ಟ್(ಡಿಡಿ)ಯೊಂದಿಗೆ ತಮ್ಮ ಬಯೋಡಾಟ(ರೆಸ್ಯೂಮ್)ವನ್ನು ರಿಜಿಸ್ಟರ್ ಪೋಸ್ಟ್ ಮುಖಾಂತರ ಈ ಕೆಳಕಂಡ ವಿಳಾಸಕ್ಕೆ ಜನವರಿ 30, 2023ಕ್ಕೆ ಮುನ್ನ ಕಳುಹಿಸಬೇಕು.
ಕೇಂದ್ರ ಕಚೇರಿ ವಿಟ್ಲ,
#1/101 CPCRI ಬಳಿ,
ಮಂಗಳ ಮಂಟಪ,
ಪುತ್ತೂರು ರಸ್ತೆ
ವಿಟ್ಲ
ದಕ್ಷಿಣ ಕನ್ನಡ-574243
ಡಿಡಿಯನ್ನು South Canara Coconut Farmers Producer Company Ltd. ಹೆಸರಿಗೆ ಮಾಡಿಸತಕ್ಕದ್ದು.
ಅಕೌಂಟ್ ನಂಬರ್- 29040200010143
IFSC-BARBOVJVITL
ಬ್ಯಾಂಕ್ ಆಫ್ ಬರೋಡಾ,
ವಿಟ್ಲ ಶಾಖೆ
ಅಭ್ಯರ್ಥಿಗಳು ಹೆಚ್ಚಿ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ coconutfarmers.in ಗೆ ಭೇಟಿ ನೀಡಬಹುದು.
ಅಥವಾ
ಮೊಬೈಲ್ ನಂಬರ್ 7338567763, 7899367763 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ