FCI Recruitment 2021: ತಿಂಗಳಿಗೆ ₹ 64,400 ಸಂಬಳ, ಭಾರತೀಯ ಆಹಾರ ನಿಗಮದಲ್ಲಿ 860 ವಾಚ್​ಮನ್ ಹುದ್ದೆಗಳು ಖಾಲಿ

ಫುಡ್​ ಕಾರ್ಪೋರೇಷನ್ ಆಫ್ ಇಂಡಿಯಾ ನೇಮಕಾತಿಯ ವಾಚ್​ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಅದೇ ರೀತಿ ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.

FCI

FCI

  • Share this:
FCI Recruitment 2021: ಭಾರತೀಯ ಆಹಾರ ನಿಗಮವು(Food Corporation of India-FCI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 860 ವಾಚ್​ಮನ್(Watchman) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ
ಹುದ್ದೆಯ ಹೆಸರು ವಾಚ್​ಮನ್
ಒಟ್ಟು ಹುದ್ದೆಗಳು 860
ವಿದ್ಯಾರ್ಹತೆ 8ನೇ ತರಗತಿ
 ಉದ್ಯೋಗದ ಸ್ಥಳ ಪಂಜಾಬ್
ವೇತನ ಮಾಸಿಕ ₹ 23,300-64,400
ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 11/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/10/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10/11/2021

ವಿದ್ಯಾರ್ಹತೆ:

ವಾಚ್​ಮನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. 8ನೇ ತರಗತಿ ಪಾಸಾಗಿರುವವರು ವಾಚ್​ಮನ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:Fisheries Department: ತಿಂಗಳಿಗೆ ₹ 58,100 ಸಂಬಳ, 8ನೇ ತರಗತಿ ಪಾಸಾದವರಿಗೆ ಮೀನುಗಾರಿಕಾ ಇಲಾಖೆಯಲ್ಲಿ ಬಂಪರ್ ಉದ್ಯೋಗ

ವಯೋಮಿತಿ:

ಫುಡ್​ ಕಾರ್ಪೋರೇಷನ್ ಆಫ್ ಇಂಡಿಯಾ ನೇಮಕಾತಿಯ ವಾಚ್​ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಅದೇ ರೀತಿ ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.

ಭಾರತ ಆಹಾರ ನಿಗಮವು ವಾಚ್‌ಮನ್‌ ಹುದ್ದೆಗಳನ್ನು ಪಂಜಾಬ್‌ ಶಾಖೆಗಳಲ್ಲಿ ನೇಮಕ ಮಾಡಲಿದೆ.

ವೇತನ:

ಭಾರತೀಯ ಆಹಾರ ನಿಗಮ ನೇಮಕಾತಿಯ ವಾಚ್​ಮನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 23,300-64,400 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ₹250 ರೂ. ಅರ್ಜಿ ಶುಲ್ಕ ಪಾವತಿಸಬೇಕು.

  • ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

  • ಅರ್ಜಿ ಶುಲ್ಕವನ್ನು ಡೆಬಿಡ್ ಕಾರ್ಡ್/ ಕ್ರೆಡಿಟ್ ಕಾರ್ಡ್​/ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.


ಇದನ್ನೂ ಓದಿ:HPCL Recruitment 2021: ತಿಂಗಳಿಗೆ 2 ಲಕ್ಷ ರೂ. ಸಂಬಳ, HPCL ನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಖಾಲಿ

ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ

  • ದಾಖಲಾತಿ ಪರಿಶೀಲನೆ

  • ವೈಯಕ್ತಿಕ ಸಂದರ್ಶನ


ಪರೀಕ್ಷೆಗೂ 15 ದಿನ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪರೀಕ್ಷೆಯ ದಿನಾಂಕ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್​ಸೈಟ್​ fci.gov.in ಗೆ ಭೇಟಿ ನೀಡಿ.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: