FACT Recruitment: ಕ್ಲರ್ಕ್​ ಮತ್ತು ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಉದ್ಯೋಗದ ವಿವರ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 7 ಆಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸಿ

ಹುದ್ದೆಗೆ ಅರ್ಜಿ ಸಲ್ಲಿಸಿ

  • Share this:
    ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್​​ನಿಂದ (Fertilizers and Chemicals Travancore Limited) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್​ ಮತ್ತು ಕ್ಲರ್ಕ್ (Stenographer, Clerk)​ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ, ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 7 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ (FACT)
    ಹುದ್ದೆ: ಕ್ಲರ್ಕ್, ಸ್ಟೆನೋಗ್ರಾಫರ್
    ಹುದ್ದೆ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
    ಕಾರ್ಯ ನಿರ್ವಹಣೆ ಸ್ಥಳ: ಆಂಧ್ರಪ್ರದೇಶ - ಕರ್ನಾಟಕ - ಕೇರಳ - ತಮಿಳುನಾಡು
    ವೇತನ: 20000 ರೂ. ಪ್ರತಿ ತಿಂಗಳು


















    ಹುದ್ದೆವಿದ್ಯಾರ್ಹತೆವಯೋಮಿತಿ
    ಗುಮಾಸ್ತಯಾವುದೇ ವಿಷಯದಲ್ಲಿ ಪದವಿಗರಿಷ್ಠ 26 ವರ್ಷ
    ಸ್ಟೆನೋಗ್ರಾಫರ್ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ, ಪದವಿಗರಿಷ್ಠ 26 ವರ್ಷ

    ವಯೋಮಿತಿ ಸಡಿಲಿಕೆ:
    ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಅಭ್ಯರ್ಥಿಗಳು: 05 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ಏರ್​ ಇಂಡಿಯಾದಲ್ಲಿದೆ ಉದ್ಯೋಗ; ಪದವಿ ಆದವರಿಗೆ ಅವಕಾಶ

    ಅರ್ಜಿ ಸಲ್ಲಿಕೆ: ಆನ್​ಲೈನ್​ ಮತ್ತು ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಆಗಸ್ಟ್ 2022
    ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 17 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: fact.co.in

    ಇದನ್ನು ಓದಿ: ರೈಲ್​ ಇಂಡಿಯಾದಲ್ಲಿ ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ; ಬೆಂಗಳೂರಿನಲ್ಲಿ ಕೆಲಸ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಯಾವುದೇ ಅನುಭವವಿದ್ದರೆ ಇತ್ಯಾದಿ ಜೊತೆಗೆ ಎಲ್ಲಾ ಅಂಕಪಟ್ಟಿಗಳನ್ನು ದಾಖಲೆಗಳನ್ನು ಲಗತ್ತಿಸಿ

    -ಎಲ್ಲಾ ದಾಖಲೆಗಳನ್ನು ಮೇಲ್ಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸಲ್ಲಿಕೆಯಾಗುವಂತೆ ಅಂಚೆ ಅಥವಾ ಸ್ಪೀಡ್​ ಪೋಸ್ಟ್​ ಮೂಲಕ ಕಳುಹಿಸಬಹುದಾಗಿದೆ.

    ಅರ್ಜಿ ಸಲ್ಲಿಸಬೇಕಾದ ವಿಳಾಸ

    ಡಿಜಿಎಂ (ಎಚ್​ಆರ್​​) ಐಆರ್​​, ಮಾನವ ಸಂಪನ್ಮೂಲ ಇಲಾಖೆ, ಎಫ್​ಇಡಿಒ ಕಟ್ಟಡ, ಎಫ್​​ಎಸಿಟಿ, ಉದ್ಯೋಗಮಂಡಲ, ಪಿನ್​ ಕೋಡ್​​ – 683501, ಕೇರಳ.
    Published by:Seema R
    First published: