Fisheries Department: ತಿಂಗಳಿಗೆ ₹ 58,100 ಸಂಬಳ, 8ನೇ ತರಗತಿ ಪಾಸಾದವರಿಗೆ ಮೀನುಗಾರಿಕಾ ಇಲಾಖೆಯಲ್ಲಿ ಬಂಪರ್ ಉದ್ಯೋಗ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ತಮಿಳುನಾಡು ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣ ಇಲಾಖೆ(Tamil Nadu Fisheries and Fishermen Welfare Department)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಆಫೀಸ್ ಅಸಿಸ್ಟೆಂಟ್(Office Assistant) ಹುದ್ದೆಗಳು ಖಾಲಿ ಇದ್ದು, 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 10 ರವರೆಗೆ ಆನ್​ಲೈನ್(Online)​ ಮೂಲಕ ಅರ್ಜಿ ಹಾಕಬಹುದು. ಅಕ್ಟೋಬರ್ 23ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ತಮಿಳುನಾಡು ಮೀನುಗಾರಿಕಾ ಇಲಾಖೆಯ ಅಧಿಕೃತ ವೆಬ್​ಸೈಟ್ www.tn.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ತಮಿಳುನಾಡು ಮೀನುಗಾರಿಕಾ ಮತ್ತು ಮೀನುಗಾರರ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು ಆಫೀಸ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು 05
ವಿದ್ಯಾರ್ಹತೆ 8ನೇ ತರಗತಿ ಪಾಸ್
ಉದ್ಯೋಗದ ಸ್ಥಳ ಚೆನ್ನೈ
ಸಂಬಳ ಮಾಸಿಕ ₹ 15,700-58,100
ಅರ್ಜಿ ಸಲ್ಲಿಸುವ ವಿಧಾನ ಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 23/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/11/2021ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ-23/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021

ಇದನ್ನೂ ಓದಿ:Post Office Recruitment 2021: ತಿಂಗಳಿಗೆ ₹81,100 ಸಂಬಳ, 10th, 12th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಕೆಲಸ

ಅರ್ಜಿ ಶುಲ್ಕ

ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ:

ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18-32 ವರ್ಷದೊಳಗಿರಬೇಕು.

ಸಂಬಳ:

ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ₹15,700- 58,100 ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ ತಮಿಳುನಾಡು ಸರ್ಕಾರದ ಅಧಿಕೃತ ವೆಬ್​ಸೈಟ್ www.tn.gov.in/ ಗೆ ಭೇಟಿ ನೀಡಿ.

  • ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲಾತಿಗಳನ್ನು ಒಂದ್ ಎನ್ವಲಪ್​ ಕವರ್​ನಲ್ಲಿ ಹಾಕಿ ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಪೋಸ್ಟ್ ಮಾಡಿ. ಪೋಸ್ಟ್ ಮಾಡುವ ಮುನ್ನ ಯಾವ ಹುದ್ದೆಗೆ ಅರ್ಜಿ ಹಾಕಿದ್ದೀರಿ ಎಂಬುದನ್ನು ಅಲ್ಲಿ ನಮೂದಿಸಿ.


ಇದನ್ನೂ ಓದಿ:KRCL Recruitment 2021: ಕೊಂಕಣ ರೈಲ್ವೆಯಲ್ಲಿ 139 ಅಪ್ರೆಂಟಿಸ್ ಹುದ್ದೆಗಳು ಖಾಲಿ; BE, B. Tech ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಪೋಸ್ಟ್ ಮಾಡಬೇಕಿರುವ ವಿಳಾಸ

The Commissioner of Fisheries and Fishermen Welfare,
Integrated Animal Husbandry,
Diarying & Fisheries Office Complex,
Nandanam,
Chennai-600035ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: