Forest Department Recruitment 2021: ಸ್ನಾತಕೋತ್ತರ ಪದವೀಧರರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಜೂನಿಯರ್ ರಿಸರ್ಚ್​ ಫೆಲೋ, ಇಂಟರ್ನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

Forest Department

Forest Department

  • Share this:
Forest Department Recruitment 2021: ತಮಿಳುನಾಡು ಅರಣ್ಯ ಇಲಾಖೆ(Tamil Nadu Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಜೂನಿಯರ್ ರಿಸರ್ಚ್ ಫೆಲೋ(Junior Research Fellow) ಮತ್ತು ಇಂಟರ್ನ್(Intern) ಹುದ್ದೆಗಳು ಖಾಲಿ ಇದ್ದು, ಸ್ನಾತಕೋತ್ತರ ಪದವೀಧರರು(Post Graduates) ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 5ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.forests.tn.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆತಮಿಳುನಾಡು ಅರಣ್ಯ ಇಲಾಖೆ
ಹುದ್ದೆಯ ಹೆಸರುಜೂನಿಯರ್ ರಿಸರ್ಚ್​ ಫೆಲೋ, ಇಂಟರ್ನ್​
ಒಟ್ಟು ಹುದ್ದೆಗಳು11
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳವಂದಲೂರ್
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30/11/2021 & 5/12/2021ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021 & 5/12/2021

ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100

ಹುದ್ದೆಯ ಮಾಹಿತಿ:

ಜೂನಿಯರ್ ರಿಸರ್ಚ್​ ಫೆಲೋ- 03
ಇಂಟರ್ನ್​- 08
ಒಟ್ಟು -11 ಹುದ್ದೆಗಳು

ವಿದ್ಯಾರ್ಹತೆ:

ಜೂನಿಯರ್ ರಿಸರ್ಚ್​ ಫೆಲೋ, ಇಂಟರ್ನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ:

ಜೂನಿಯರ್ ರಿಸರ್ಚ್​ ಫೆಲೋ- 28 ವರ್ಷ
ಇಂಟರ್ನ್​- 30 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ಜೂನಿಯರ್ ರಿಸರ್ಚ್​ ಫೆಲೋ, ಇಂಟರ್ನ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ವಂದಲೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:

ಜೂನಿಯರ್ ರಿಸರ್ಚ್​ ಫೆಲೋ, ಇಂಟರ್ನ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: KRCL Recruitment 2021: ಮಾಸಿಕ ವೇತನ ₹ 30,000, ಕೊಂಕಣ ರೈಲ್ವೆಯಲ್ಲಿ BE, B Tech ಪಾಸಾದವರಿಗೆ ಉದ್ಯೋಗ

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: