GKVK Bangalore Recruitment 2022: ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(Gandhi Krishi Vignana Kendra Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಅಸಿಸ್ಟೆಂಟ್ ಪ್ರೊಫೆಸರ್(Assistant Professor), ಫಾರ್ಮ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಾರ್ಚ್ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ uasbangalore.edu.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು |
ಹುದ್ದೆಯ ಹೆಸರು |
ಅಸಿಸ್ಟೆಂಟ್ ಪ್ರೊಫೆಸರ್, ಫಾರ್ಮ್ ಮ್ಯಾನೇಜರ್ |
ಒಟ್ಟು ಹುದ್ದೆಗಳು |
19 |
ವಿದ್ಯಾರ್ಹತೆ |
ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 35,000-1,82,400 |
ಅರ್ಜಿ ಸಲ್ಲಿಕೆ ಬಗೆ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
08/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
09/03/2022 |
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರೊಫೆಸರ್- 15
ಫಾರ್ಮ್ ಮ್ಯಾನೇಜರ್ -4
ಇದನ್ನೂ ಓದಿ: Government Job: ರಾಜ್ಯ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, BE/B. Tech ಪದವೀಧರರಿಗೆ ಬಂಪರ್ ಅವಕಾಶ
ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರೊಫೆಸರ್- ಸ್ನಾತಕೋತ್ತರ ಪದವಿ, ಪಿಎಚ್ಡಿ
ಫಾರ್ಮ್ ಮ್ಯಾನೇಜರ್ - ಅಗ್ರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ/ಸಿರಿಕಲ್ಚರ್/ಅಗ್ರಿಕಲ್ಚರಲ್ ಮಾರ್ಕೆಟಿಂಗ್ & ಕಾರ್ಪೊರೇಷನ್ನಲ್ಲಿ ಪದವಿ
ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್- 42 ವರ್ಷ
ಫಾರ್ಮ್ ಮ್ಯಾನೇಜರ್ -40 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 1 ವರ್ಷ
SC/ST ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
ಅಸಿಸ್ಟೆಂಟ್ ಪ್ರೊಫೆಸರ್
SC/ST ಅಭ್ಯರ್ಥಿಗಳು: ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.2000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಫಾರ್ಮ್ ಮ್ಯಾನೇಜರ್
SC/ST ಅಭ್ಯರ್ಥಿಗಳು: ರೂ.500/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಇದನ್ನೂ ಓದಿ:BDA Recruitment 2022: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹ 1 ಲಕ್ಷ ಸಂಬಳ
ವೇತನ:
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 57,700-1,82,400
ಫಾರ್ಮ್ ಮ್ಯಾನೇಜರ್ - ಮಾಸಿಕ ₹ 35,400-1,12,400
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/03/2022
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತಾಧಿಕಾರಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, GKVK
ಬೆಂಗಳೂರು-560065
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ