Government Job: ಹಾಸನ ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ನರೇಗಾ (MGNREGA) ಯೋಜನೆಯಡಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹಾಸನ ಜಿಲ್ಲಾ ಪಂಚಾಯತ್

ಹಾಸನ ಜಿಲ್ಲಾ ಪಂಚಾಯತ್

  • Share this:
Hassan Zilla Panchayat Recruitment 2022: ಹಾಸನ ಜಿಲ್ಲಾ ಪಂಚಾಯತ್ (Hassan Zilla Panchayat ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಬರಿಗಾಲಿನ ತಂತ್ರಜ್ಞ (Barefoot Technician- BFT) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು. ನರೇಗಾ (MGNREGA) ಯೋಜನೆಯಡಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hassan.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಹಾಸನ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರುಬರಿಗಾಲಿನ ತಂತ್ರಜ್ಞ (BFT)
ಒಟ್ಟು ಹುದ್ದೆಗಳು16
ವಿದ್ಯಾರ್ಹತೆ10ನೇ ತರಗತಿ
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20/01/2022



ಶೈಕ್ಷಣಿಕ ಅರ್ಹತೆ:
ಹಾಸನ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ SSLC ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Bengaluru Metro Jobs: ತಿಂಗಳಿಗೆ ₹ 60,000 ಸಂಬಳ, ಬೆಂಗಳೂರು ಮೆಟ್ರೋದಲ್ಲಿ 50 ಹುದ್ದೆಗಳು ಖಾಲಿ

ಅನುಭವ:

ಹಾಸನ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 2-3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 18-45 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಹಾಸನ ಜಿಲ್ಲಾ ಪಂಚಾಯಿತಿ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ECIL Recruitment 2022: ತಿಂಗಳಿಗೆ ₹ 20,000 ಸಂಬಳ, ಡಿಪ್ಲೋಮಾ ಆದವರಿಗೆ ಉದ್ಯೋಗಾವಕಾಶ

ಅರ್ಜಿ ಶುಲ್ಕ:
ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/01/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
Published by:Latha CG
First published: