Government Job: ಧಾರವಾಡ ಜಿಲ್ಲಾ ಪಂಚಾಯತ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, B. Com ಪದವೀಧರರಿಗೆ ಅವಕಾಶ

ಒಟ್ಟು 6 ಅಡ್ಮಿನಿಸ್ಟ್ರೇಟಿವ್​ ಅಸಿಸ್ಟೆಂಟ್  ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನರೇಗಾ ಯೋಜನೆಯಡಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್

ಧಾರವಾಡ ಜಿಲ್ಲಾ ಪಂಚಾಯತ್

  • Share this:
Dharwad Zilla Panchayat Recruitment 2022:  ಧಾರವಾಡ ಜಿಲ್ಲಾ ಪಂಚಾಯತ್(Dharwad Zilla Panchayat) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಅಡ್ಮಿನಿಸ್ಟ್ರೇಟಿವ್​ ಅಸಿಸ್ಟೆಂಟ್(Administrative Assistant)  ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನರೇಗಾ ಯೋಜನೆಯಡಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ dharwad.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಸಂಸ್ಥೆ ಧಾರವಾಡ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು06
ವಿದ್ಯಾರ್ಹತೆಬಿಕಾಂ
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ07/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/01/2022ಶೈಕ್ಷಣಿಕ ಅರ್ಹತೆ:
ಧಾರವಾಡ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: STPI Recruitment 2022: ಬೆಂಗಳೂರಿನಲ್ಲಿ 18 ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1,42,000

ಇತರೆ ಅರ್ಹತೆಗಳು:
ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್‌ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಅಭ್ಯರ್ಥಿಗಳು MS Word, ಎಕ್ಸೆಲ್ ಮತ್ತು ಪವರ್ ಪಾಯಿಂಟ್ ಪ್ರೆಸೆಂಟೇಶನ್‌ನಲ್ಲಿ ಕೌಶಲ್ಯದೊಂದಿಗೆ ಉತ್ತಮ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:
ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಧಾರವಾಡ ಜಿಲ್ಲಾ ಪಂಚಾಯತ್ ನಿಯಮಾನುಸಾರ ಆಯಾಯ ವರ್ಗಕ್ಕೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಧಾರವಾಡ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ.

ಇದನ್ನೂ ಓದಿ: Anganwadi Jobs: ಶಿವಮೊಗ್ಗದಲ್ಲಿ 88 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
​ಟೈಪಿಂಗ್ ಟೆಸ್ಟ್​​
ಪ್ರಾಕ್ಟಿಕಲ್ ಟೆಸ್ಟ್

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18/01/2022
Published by:Latha CG
First published: