KSMCL Recruitment 2022: ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (Karnataka State Minerals Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಮೈನ್ ಫೋರ್ಮ್ಯಾನ್(Mine Foreman) ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್ 15ರಂದು ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ksmc.karnataka.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ |
ಹೆಸರು |
ಮೈನ್ ಫೋರ್ಮ್ಯಾನ್ |
ಒಟ್ಟು ಹುದ್ದೆಗಳು |
05 |
ವಿದ್ಯಾರ್ಹತೆ |
ಡಿಪ್ಲೋಮಾ |
ಉದ್ಯೋಗದ ಸ್ಥಳ |
ಕರ್ನಾಟಕ |
ವೇತನ |
ಮಾಸಿಕ ₹28,000 |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
28/02/2022 |
ಸಂದರ್ಶನ ನಡೆಯುವ ದಿನಾಂಕ |
15/03/2022 |
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೈನ್ ಫೋರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಮೈನಿಂಗ್ ಎಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೈನ್ ಫೋರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 28, 2022ಕ್ಕೆ 23ರಿಂದ 45 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ನೀಡಲಾಗುತ್ತದೆ.
ಅನುಭವ:
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕಡ್ಡಾಯವಾಗಿ ಅನುಭವ ಹೊಂದಿರಬೇಕು.
ವೇತನ:
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೈನ್ ಫೋರ್ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 28,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/02/2022
ಸಂದರ್ಶನ ನಡೆಯುವ ದಿನಾಂಕ: 15/03/2022
ಸಂದರ್ಶನ ನಡೆಯುವ ಸ್ಥಳ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಕಚೇರಿ
KSMCL
ಐರನ್ ಒರೆ ಡಿವಿಶನ್
Sy.No.429/2, ಹೌಸ್ ನಂ.526,
2nd ವಾರ್ಡ್
ವೈಷ್ಣವಿ ಫಾರ್ಮ್ ಹೌಸ್
ದೌಲತ್ಪುರ ರಸ್ತೆ
ಸಂಡೂರ್-583119
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ