RDPR Karnataka Recruitment 2022: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ -ಕರ್ನಾಟಕ(Rural Development and Panchayat Raj Department-Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರ(Karnataka Government) ದ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 6406 ಹುದ್ದೆಗಳು ಖಾಲಿ ಇದ್ದು, ಪಿಯುಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ -ಕರ್ನಾಟಕ ಅಧಿಕೃತ ವೆಬ್ಸೈಟ್ rdpr.karnataka.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಹುದ್ದೆಯ ಹೆಸರು |
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ |
ಒಟ್ಟು ಹುದ್ದೆಗಳು |
6406 |
ವಿದ್ಯಾರ್ಹತೆ |
ಪಿಯುಸಿ |
ಉದ್ಯೋಗದ ಸ್ಥಳ |
ಕರ್ನಾಟಕ |
ವೇತನ |
ಮಾಸಿಕ ₹ 21,400-42,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
05/09/2021 |
ಹುದ್ದೆಯ ಮಾಹಿತಿ:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827
ಸೆಕೆಂಡ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ - 2579
ಇದನ್ನೂ ಓದಿ: BSF Recruitment 2022: SSLC, ITI ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ, ಮಾಸಿಕ ವೇತನ ₹ 69,000
ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು RDPR ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು.
ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: JOBS: ಧಾರವಾಡ ಕೃಷಿ ವಿಜ್ಞಾನ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 31,000
ಅರ್ಜಿ ಶುಲ್ಕ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ