Govt Job: ತುಮಕೂರು, ಕೋಲಾರ, ಚಿತ್ರದುರ್ಗದಲ್ಲಿ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ಈ ಹುದ್ದೆಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಗರಿಷ್ಠ 3 ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. 

ಜಿಟಿಟಿಸಿ

ಜಿಟಿಟಿಸಿ

  • Share this:
    ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ(Government Tool Room an Training Centre) ಪ್ರಿನ್ಸಿಪಾಲ್ (Principal)​ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ಕೋಲಾರ, ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 22 ಆಗಿದೆ.

    ಈ ಹುದ್ದೆಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಗರಿಷ್ಠ 3 ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC)
    ಹುದ್ದೆಯ ಹೆಸರು: ಪ್ರಾಂಶುಪಾಲರು,
    ಹುದ್ದೆಗಳ ಸಂಖ್ಯೆ: 3
    ಉದ್ಯೋಗ ಸ್ಥಳ: ಕೋಲಾರ, ಚಿತ್ರದುರ್ಗ ಮತ್ತು ತುಮಕೂರು
    ಸಹಾಯಕ ಪ್ರಾಧ್ಯಾಪಕರು
    ವೇತನ: 50000 ರೂ ಪ್ರತಿ ತಿಂಗಳು













    ಹುದ್ದೆಹುದ್ದೆ ಸಂಖ್ಯೆವಯೋಮಿತಿ
    ಪ್ರಾಂಶುಪಾಲರು328-63 ವರ್ಷ

    ಶೈಕ್ಷಣಿಕ ಅರ್ಹತೆ : ಎಐಸಿಟಿಇ ಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಟೂಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಸಮಾನಾಂತರವಾದ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.

    ಅನುಭವ : ಎಐಸಿಟಿಇಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ಇಂಜಿನಿಯರಿಂಗ್ ಕಾಲೇಜು/ ಕೇಂದ್ರಗಳಲ್ಲಿ 5 ವರ್ಷಗಳ ಬೋಧನಾ ಅನುಭವ ಹೊಂದಿರಬೇಕು.

    ಅರ್ಜಿ ಸಲ್ಲಿಕೆ ವಿಧಾನ : ಆಫ್​ಲೈನ್​

    ಇದನ್ನು ಓದಿ: ಬೆಂಗಳೂರಿನ ಜವಾಹರ್​​ಲಾಲ್​​ ನೆಹರು ಸಂಶೋಧನಾ ಸಂಸ್ಥೆಯಲ್ಲಿದೆ ಕೆಲಸ; ಇಲ್ಲಿದೆ ವಿವರ

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಆಯ್ಕೆ ವಿಧಾನ: ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಆಗಸ್ಟ್ 2022
    ಪ್ರಿನ್ಸಿಪಾಲ್ ಹುದ್ದೆಗೆ ಲಿಖಿತ ಪರೀಕ್ಷೆಯ ದಿನಾಂಕ: 22 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್​​ಗೆ ಇಲ್ಲಿ ಕ್ಲಿಕ್ ಮಾಡಿ
    ಅರ್ಜಿ ನಮೂನೆಗೆ ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: gttc.karnataka.gov.in

    ಇದನ್ನು ಓದಿ: ಕೆಇಎನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ನಮೂದಿಸಿ

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಈ ಕೆಳಗಿನ ವಿಳಾಸಕ್ಕೆ ಅಂಚೆ, ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಕಳುಹಿಸಬೇಕು.

    ವ್ಯವಸ್ಥಾಪಕ ನಿರ್ದೇಶಕರು, ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರ, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು-560010
    Published by:Seema R
    First published: