HAL Recruitment 2021: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited)ನಲ್ಲಿ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆ(Trade Apprentice Posts)ಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 12ನೇ ತರಗತಿ, ಐಟಿಐ ಮತ್ತು 8ನೇ ತರಗತಿ ಪಾಸಾಗಿರುವವರು HALನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ(Trade Apprentice Posts) ಅರ್ಜಿ ಸಲ್ಲಿಸಲು ಅರ್ಹರು. ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್ಲೈನ್(Online) ಮೂಲಕ ಡಿಸೆಂಬರ್ 6ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗಾಂಕ್ಷಿಗಳು(Jobseekers) HAL ನೇಮಕಾತಿ-2021ರ ಖಾಲಿ ಇರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ hal-india.co.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಟ್ರೇಡ್ ಅಪ್ರೆಂಟಿಸ್ |
ವಿದ್ಯಾರ್ಹತೆ |
12ನೇ ತರಗತಿ, ಐಟಿಐ ಮತ್ತು 8ನೇ ತರಗತಿ ಪಾಸ್ |
ವೇತನ |
ನಿಯಮಾನುಸಾರ |
ಉದ್ಯೋಗದ ಸ್ಥಳ |
ಅಮೇಥಿ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
17/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
06/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/12/2021
ಇದನ್ನೂ ಓದಿ: NALCO Recruitment 2021: ಪದವಿ ಪಾಸಾದವರಿಗೆ ಅವಕಾಶ, ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ ವಿವಿಧ ಹುದ್ದೆಗಳು ಖಾಲಿ
ವಿದ್ಯಾರ್ಹತೆ:
HALನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ ಬೋರ್ಡ್ನಿಂದ 12ನೇ ತರಗತಿ, ಐಟಿಐ ಮತ್ತು 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
HALನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 32 ವರ್ಷ ವಯಸ್ಸಾಗಿರಬೇಕು.
ಉದ್ಯೋಗದ ಸ್ಥಳ:
HALನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಪೋಸ್ಟಿಂಗ್ ಹಾಕಲಾಗುತ್ತದೆ.
ವೇತನ:
HALನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ECHS Recruitment 2021: ತಿಂಗಳಿಗೆ ₹87,500 ಸಂಬಳ, ECHSನಲ್ಲಿ ವಿವಿಧ ಹುದ್ದೆಗಳು ಖಾಲಿ, ಬೆಂಗಳೂರಿನಲ್ಲಿ ಉದ್ಯೋಗ
ಆಯ್ಕೆ ಪ್ರಕ್ರಿಯೆ:
- ದಾಖಲಾತಿ ಪರಿಶೀಲನೆ
- ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ