HAL Recruitment 2021: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited)ನಲ್ಲಿ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆ(Trade Apprentice Posts)ಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 11 ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೊಮಾ, ಜಿಎನ್ಎಂ, ಡಿ.ಫಾರ್ಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ hal-india.co.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ |
ಒಟ್ಟು ಹುದ್ದೆಗಳು |
11 |
ವಿದ್ಯಾರ್ಹತೆ |
ಡಿಪ್ಲೊಮಾ, ಜಿಎನ್ಎಂ, ಡಿ.ಫಾರ್ಮಾ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 15,910-21,473 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
24/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
14/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021
ಇದನ್ನೂ ಓದಿ: Forest Department Recruitment 2021: ಸ್ನಾತಕೋತ್ತರ ಪದವೀಧರರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ
ಅರ್ಜಿ ಶುಲ್ಕ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಯ ಮಾಹಿತಿ:
ಸ್ಟಾಫ್ ನರ್ಸ್- 07
ಫಾರ್ಮಾಸಿಸ್ಟ್ -01
ಫಿಜಿಯೋಥೆರಪಿಸ್ಟ್ -01
ಡ್ರೆಸ್ಸೆರ್ - 02
ಒಟ್ಟು-11 ಹುದ್ದೆಗಳು
ವಿದ್ಯಾರ್ಹತೆ:
ಸ್ಟಾಫ್ ನರ್ಸ್- ಪಿಯುಸಿ ಜೊತೆಗೆ ಜನರಲ್ ನರ್ಸಿಂಗ್ & ಮಿಡ್ವೈಫರಿಯಲ್ಲಿ 3 ವರ್ಷಗಳ ಡಿಪ್ಲೋಮಾ ಮಾಡಿರಬೇಕು.
ಫಾರ್ಮಾಸಿಸ್ಟ್- ಪಿಯುಸಿ ಜೊತೆಗೆ 2 ವರ್ಷಗಳ ಪಿಜಿಯೋಥೆರಪಿ ಡಿಪ್ಲೋಮಾ ಮಾಡಿರಬೇಕು.
ಫಿಜಿಯೋಥೆರಪಿಸ್ಟ್- ಪಿಯುಸಿ ಜೊತೆಗೆ 2 ವರ್ಷಗಳ ಡಿ ಫಾರ್ಮಾ ಮಾಡಿರಬೇಕು.
ಡ್ರೆಸ್ಸೆರ್ - ಪಿಯುಸಿ ಜೊತೆಗೆ ಭಾರತೀಯ ರೆಡ್ ಕ್ರಾಸ್ ಅಥವಾ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಅಸೋಸಿಯೇಷನ್ ಅಥವಾ ಅಂತಹ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆಯಲ್ಲಿ ತರಬೇತಿಯ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,910-21,473 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: HAL Recruitment 2021: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ