• Home
  • »
  • News
  • »
  • jobs
  • »
  • HAL Recruitment 2022: ಬೆಂಗಳೂರು HALನಲ್ಲಿ ಪ್ರಿನ್ಸಿಪಾಲ್​ ಹುದ್ದೆ ಖಾಲಿ, ಮಾಸಿಕ ವೇತನ ₹ 78,000

HAL Recruitment 2022: ಬೆಂಗಳೂರು HALನಲ್ಲಿ ಪ್ರಿನ್ಸಿಪಾಲ್​ ಹುದ್ದೆ ಖಾಲಿ, ಮಾಸಿಕ ವೇತನ ₹ 78,000

HAL

HAL

ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 78,800 ವೇತನ ನೀಡಲಾಗುತ್ತದೆ.

  • Share this:

HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಿನ್ಸಿಪಾಲ್(Principal)​​ ಹುದ್ದೆಗಳು ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 5 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 29, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್
ಹುದ್ದೆಯ ಹೆಸರುಪ್ರಿನ್ಸಿಪಾಲ್
ಒಟ್ಟು ಹುದ್ದೆಗಳು02
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ವೇತನಮಾಸಿಕ ₹ 78,800
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನಆಫ್​ಲೈನ್​​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29/01/2022

ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: NCDIR Recruitment 2022: ಬೆಂಗಳೂರಿನಲ್ಲಿ 15 ಹುದ್ದೆಗಳು ಖಾಲಿ, ಮಾಸಿಕ ವೇತನ ₹ 42,000


ವೇತನ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 78,800 ವೇತನ ನೀಡಲಾಗುತ್ತದೆ.


ಉದ್ಯೋಗದ ಸ್ಥಳ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.


ಅನುಭವ:
ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳ ಬೋಧನಾ ಅನುಭವವನ್ನು ಹೊಂದಿರಬೇಕು. ಅದರಲ್ಲಿ 5 ವರ್ಷಗಳ PGT ಯಾಗಿ ಬೋಧನಾ ಅನುಭವ ಮತ್ತು 3 ವರ್ಷಗಳ ಆಡಳಿತಾತ್ಮಕ ಅನುಭವ ಇರಬೇಕು. ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಉಪ-ಪ್ರಾಂಶುಪಾಲರು / ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರಬೇಕು.


ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 40-50 ವರ್ಷದೊಳಗಿರಬೇಕು.


ಅರ್ಜಿ ಶುಲ್ಕ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿ ವಿಧಾನ: ಡಿಮ್ಯಾಂಡ್​ ಡ್ರಾಫ್ಟ್​


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/01/2022


ಇದನ್ನೂ ಓದಿ: Bengaluru Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ C-DAC Bengaluru, ಈಗಲೇ ಅಪ್ಲೈ ಮಾಡಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಕಾರ್ಯದರ್ಶಿ
HAL ಶಿಕ್ಷಣ ಸಮಿತಿ
C o. HAL ಸೌಲಭ್ಯಗಳ ನಿರ್ವಹಣಾ ವಿಭಾಗ
ವಿಮಾನಪುರ ಅಂಚೆ
ಬೆಂಗಳೂರು - 560017

Published by:Latha CG
First published: