HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್​​ನಲ್ಲಿ 85 ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

HAL

HAL

  • Share this:
HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 85 ಮ್ಯಾನೇಜ್​ಮೆಂಟ್ ಟ್ರೇನಿ & ಡಿಸೈನ್ ಟ್ರೇನಿ ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































 ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​​
 ಹುದ್ದೆಯ ಹೆಸರು ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ
 ಒಟ್ಟು ಹುದ್ದೆಗಳು 85
 ವಿದ್ಯಾರ್ಹತೆ ಬಿಇ/ಬಿ.ಟೆಕ್​
 ವೇತನ ನಿಯಮಾನುಸಾರ
 ಉದ್ಯೋಗದ ಸ್ಥಳ ಭಾರತದಲ್ಲಿ ಎಲ್ಲಿ ಬೇಕಾದರೂ
 ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್
 ಅರ್ಜಿ ಸಲ್ಲಿಕೆ ಆರಂಭ ದಿನಾಂಕ 09/02/2022
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/03/2022

ಹುದ್ದೆಯ ಮಾಹಿತಿ:
ಮ್ಯಾನೇಜ್​​ಮೆಂಟ್ ಟ್ರೇನಿ-47
ಡಿಸೈನ್ ಟ್ರೇನಿ-38
ಒಟ್ಟು 85 ಹುದ್ದೆಗಳು

ಇದನ್ನೂ ಓದಿ: HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್​​ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುವುದು.

ಇದನ್ನೂ ಓದಿ:ESIC Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ--ಬೇಗ ಅಪ್ಲೈ ಮಾಡಿ

ವೇತನ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/03/2022
Published by:Latha CG
First published: