HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ಟೆಸ್ಟ್ ಪೈಲಟ್, ಟೆಸ್ಟ್ ಪೈಲಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಸೀನಿಯರ್ ಟೆಸ್ಟ್ ಪೈಲಟ್, ಟೆಸ್ಟ್ ಪೈಲಟ್ |
ಒಟ್ಟು ಹುದ್ದೆ |
1 |
ವೇತನ |
ಮಾಸಿಕ ₹80,000-2,40,000 |
ಉದ್ಯೋಗದ ಸ್ಥಳ |
ಬೆಂಗಳೂರು |
ಅರ್ಜಿ ಸಲ್ಲಿಕೆ ವಿಧಾನ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
25/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
16/02/2022 |
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಇರಬೇಕು.
ಇದನ್ನೂ ಓದಿ:Railway Jobs: ಬಿಎಸ್ಸಿ ನರ್ಸಿಂಗ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಫೆಬ್ರವರಿ 16ಕ್ಕೆ 48 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/02/2022
ಇದನ್ನೂ ಓದಿ: Banking Jobs: ಕರ್ನಾಟಕ ಬ್ಯಾಂಕ್ನಲ್ಲಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಹಿರಿಯ ವ್ಯವಸ್ಥಾಪಕರು(HR)
ನೇಮಕಾತಿ ವಿಭಾಗ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಕಾರ್ಪೋರೇಟ್ ಕಚೇರಿ,
15/1, ಕಬ್ಬನ್ ರಸ್ತೆ
ಬೆಂಗಳೂರು- 560001
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ