• Home
  • »
  • News
  • »
  • jobs
  • »
  • HAL Recruitment 2022: ಡಿಗ್ರಿ ಆದವರಿಗೆ ಬೆಂಗಳೂರು HALನಲ್ಲಿದೆ ಬಂಪರ್ ಉದ್ಯೋಗ

HAL Recruitment 2022: ಡಿಗ್ರಿ ಆದವರಿಗೆ ಬೆಂಗಳೂರು HALನಲ್ಲಿದೆ ಬಂಪರ್ ಉದ್ಯೋಗ

HAL

HAL

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2022ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು.

  • Share this:

    HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ವಿಸಿಟಿಂಗ್ ಕನ್ಸಲ್ಟೆಂಟ್(Visiting Consultant) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್
    ಹುದ್ದೆಯ ಹೆಸರುವಿಸಿಟಿಂಗ್ ಕನ್ಸಲ್ಟೆಂಟ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಪದವಿ
    ವೇತನನಿಯಮಾನುಸಾರ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ12/11/2022
    ಅರ್ಜಿ ಸಲ್ಲಿಸಲು ಕೊನೆ ದಿನ26/11/2022


    ವಿದ್ಯಾರ್ಹತೆ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಆಯುರ್ವೇದಿಕ್ ಮೆಡಿಸಿನ್​ನಲ್ಲಿ ಪದವಿ, ಆಯುರ್ವೇದದಲ್ಲಿ ಎಂಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: UPSC ನೇಮಕಾತಿ: ಎಂಜಿನಿಯರ್, ಲೆಕ್ಚರರ್​ ಸೇರಿ 160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಪದವೀಧರರು Apply ಮಾಡಿ


    ವಯೋಮಿತಿ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2022ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 26, 2022ಕ್ಕೆ ಮುನ್ನ ಕಳುಹಿಸಬೇಕು.


    ಚೀಫ್​ ಮ್ಯಾನೇಜರ್ (HR)
    ಇಂಡಸ್ಟ್ರಿಯಲ್ ಹೆಲ್ತ್​​ ಸೆಂಟರ್
    ಹಿಂದೂಸ್ತಾನ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
    ಸುರಂಜನ್​ದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣ)
    ಬೆಂಗಳೂರು-560017


    ಇದನ್ನೂ ಓದಿ; BEML Recruitment 2022: ಡಿಪ್ಲೋಮಾ ಪಾಸಾಗಿದ್ರೆ 80 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ-ಬೆಂಗಳೂರಿನಲ್ಲಿ ಉದ್ಯೋಗ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/11/2022
    ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26/11/2022

    Published by:Latha CG
    First published: