HAL ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಈಗಲೇ Apply ಮಾಡಿ

ಫೆಬ್ರವರಿ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

HAL

HAL

  • Share this:
HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್​ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್​ಮೆಂಟ್ ಟ್ರೇನಿ(Management Trainee) & ಡಿಸೈನ್ ಟ್ರೇನಿ(Design Trainee) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​​
ಹುದ್ದೆಯ ಹೆಸರುಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ
ಒಟ್ಟು ಹುದ್ದೆಗಳು85
ವಿದ್ಯಾರ್ಹತೆ ಬಿಇ/ಬಿ.ಟೆಕ್​
ವೇತನನಿಯಮಾನುಸಾರ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/03/2022

ಹುದ್ದೆಯ ಮಾಹಿತಿ:
ಮ್ಯಾನೇಜ್​​ಮೆಂಟ್ ಟ್ರೇನಿ-47
ಡಿಸೈನ್ ಟ್ರೇನಿ-38
ಒಟ್ಟು 85 ಹುದ್ದೆಗಳು

ಇದನ್ನೂ ಓದಿ: SIDBI ಬ್ಯಾಂಕ್​​ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ, ತಿಂಗಳಿಗೆ ₹ 70,000 ಸಂಬಳ

ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುವುದು.

ಇದನ್ನೂ ಓದಿ: Government Job: ತಿಂಗಳಿಗೆ ₹ 57,000 ಸಂಬಳ, ಮಾರ್ಚ್​​ 9ರಂದು Walk-in-Interview

ವೇತನ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಮ್ಯಾನೇಜ್​​ಮೆಂಟ್ ಟ್ರೇನಿ, ಡಿಸೈನ್ ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/03/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: