• Home
  • »
  • News
  • »
  • jobs
  • »
  • HAL Recruitment: ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 1 ಲಕ್ಷ ಸಂಬಳ

HAL Recruitment: ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 1 ಲಕ್ಷ ಸಂಬಳ

HAL

HAL

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore [Bangalore], India
  • Share this:

    HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಸೀನಿಯರ್ ಮೆಡಿಕಲ್ ಆಫೀಸರ್(ಆರ್ಥೋಪೆಡಿಕ್) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
    ಹುದ್ದೆಯ ಹೆಸರುಸೀನಿಯರ್ ಮೆಡಿಕಲ್ ಆಫೀಸರ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಎಂಬಿಬಿಎಸ್
    ವೇತನಮಾಸಿಕ ₹ 1,06,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆಫ್​​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ16/11/2022
    ಅರ್ಜಿ ಸಲ್ಲಿಸಲು ಕೊನೆ ದಿನ03/12/2022


    ವಿದ್ಯಾರ್ಹತೆ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, D' ಆರ್ಥೋ, ಎಂಎಸ್, ಡಿಎನ್​ಬಿ ಪೂರ್ಣಗೊಳಿಸಿರಬೇಕು.


    ಅನುಭವ:
    ಅಭ್ಯರ್ಥಿಗಳು MBBS, D' Ortho ನೊಂದಿಗೆ ಒಂದು ವರ್ಷದ ಪೋಸ್ಟ್​ ಕ್ವಾಲಿಫಿಕೇಶನ್ ಅನುಭವ ಹೊಂದಿರಬೇಕು.


    ವಯೋಮಿತಿ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.


    ಇದನ್ನೂ ಓದಿ: Bengaluru Jobs: ಬೆಂಗಳೂರಿನಲ್ಲಿ ಯೋಗ ಹೇಳಿಕೊಡುವ ಕೆಲಸಕ್ಕೆ ₹ 30,000 ಸಂಬಳ, ಈಗಲೇ Apply ಮಾಡಿ


    ವಯೋಮಿತಿ ಸಡಿಲಿಕೆ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ₹ 1,06,000 ವೇತನ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಎಸ್​ಸಿ/ಎಸ್​ಟಿ/ PWD ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕ ಇಲ್ಲ
    ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500 ರೂ.
    ಅರ್ಜಿ ಶುಲ್ಕ ಪಾವತಿಸುವ ಬಗೆ-ಆನ್​ಲೈನ್​


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: Government Job: SSLC, ಪಿಯುಸಿ ಪಾಸಾದವರಿಗೆ ಸರ್ಕಾರಿ ನೌಕರಿ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 3, 2022ಕ್ಕೆ ಮುನ್ನ ಕಳುಹಿಸಬೇಕು.


    ಅಪ್ಲಿಕೇಶನ್ ಫಾರಂ ಇಲ್ಲಿದೆ.


    Application form


    ಚೀಫ್​ ಮ್ಯಾನೇಜರ್ (HR)
    ಇಂಡಸ್ಟ್ರಿಯಲ್ ಹೆಲ್ತ್​​ ಸೆಂಟರ್
    ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
    ಸುರಂಜನ್​ದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣ)
    ಬೆಂಗಳೂರು-560017


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 03/12/2022


    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328023 ಗೆ ಸಂಪರ್ಕಿಸಬಹುದು.

    Published by:Latha CG
    First published: