HCL Recruitment 2022: ತಿಂಗಳಿಗೆ ₹ 35,000 ಸಂಬಳ, SSLC ಪಾಸಾದವರಿಗೆ ಬಂಪರ್ ಉದ್ಯೋಗ

ಫೆಬ್ರವರಿ 8ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

HCL

HCL

  • Share this:
Hindustan Copper Limited Recruitment 2022: ಹಿಂದೂಸ್ತಾನ್​ ಕಾಪರ್ ಲಿಮಿಟೆಡ್(Hindustan Copper Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 104 ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾಗಜಿನ್ ಕ್ಲರ್ಕ್​, ಮೆಕ್ಯಾನಿಕಲ್ ಫೋರ್​ಮ್ಯಾನ್, ಎಲೆಕ್ಟ್ರಿಷಿಯನ್, ಮೈನಿಂಗ್ ಫೋರ್​ಮ್ಯಾನ್​, ಎಲೆಕ್ಟ್ರಿಕಲ್ ಎಂಜಿನಿಯರ್, ಮೈನ್​ ಸರ್ವೇಯರ್ ಹುದ್ದೆಗಳು ಖಾಲಿ ಇದ್ದು, 10ನೇತರಗತಿ, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಸಂಸ್ಥೆಹಿಂದೂಸ್ತಾನ್​ ಕಾಪರ್ ಲಿಮಿಟೆಡ್
ಹುದ್ದೆಯ ಹೆಸರುಅಸಿಸ್ಟೆಂಟ್ ಮ್ಯಾನೇಜರ್, ಮ್ಯಾಗಜಿನ್ ಕ್ಲರ್ಕ್​, ಮೆಕ್ಯಾನಿಕಲ್ ಫೋರ್​ಮ್ಯಾನ್, ಎಲೆಕ್ಟ್ರಿಷಿಯನ್, ಮೈನಿಂಗ್ ಫೋರ್​ಮ್ಯಾನ್​, ಎಲೆಕ್ಟ್ರಿಕಲ್ ಎಂಜಿನಿಯರ್, ಮೈನ್​ ಸರ್ವೇಯರ್
ಒಟ್ಟು ಹುದ್ದೆಗಳು104
ವಿದ್ಯಾರ್ಹತೆ10ನೇ ತರಗತಿ, ಡಿಪ್ಲೋಮಾ, ಐಟಿಐ
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ ₹ 20,000-35,000
ಆಯ್ಕೆ ವಿಧಾನಸಂದರ್ಶನ
ಸಂದರ್ಶನ ನಡೆಯುವ ದಿನಾಂಕ08/02/2022ಇದನ್ನೂ ಓದಿ: Railway Jobs: ರೈಲ್ವೆ ಇಲಾಖೆಯಲ್ಲಿ 75 ಹುದ್ದೆಗಳು ಖಾಲಿ, ತಿಂಗಳಿಗೆ ₹ 45,000 ಸಂಬಳ, ಈಗಲೇ Apply ಮಾಡಿ

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್-05
ಮೈನಿಂಗ್ ಫೋರ್​ಮ್ಯಾನ್-19
ಮೆಕ್ಯಾನಿಕಲ್ ಫೋರ್​ಮ್ಯಾನ್-07
ಮ್ಯಾಗಜಿನ್ ಕ್ಲರ್ಕ್-04
ಮೈನಿಂಗ್ ಮೇಟ್-34
ಮೈನ್​ ಸರ್ವೇಯರ್-01
ಎಲೆಕ್ಟ್ರಿಕಲ್ ಸೂಪರ್​ವೈಸರ್- 16
ಎಲೆಕ್ಟ್ರಿಷಿಯನ್- 18

ವಿದ್ಯಾರ್ಹತೆ:
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 63 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,000-35,000 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: Karnataka VA Recruitment: 355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 42,000 ಸಂಬಳ

ಸಂದರ್ಶನ ನಡೆಯುವ ಸ್ಥಳ:
ಜನರಲ್ ಆಫೀಸ್ ಬಿಲ್ಡಿಂಗ್ ಕಾಂಪ್ಲೆಕ್ಸ್​
ಹಿಂದೂಸ್ತಾನ್ ಕಾಪರ್ ಲಿಮಿಟೆಡ್​/ ಇಂಡಿಯನ್ ಕಾಪರ್ ಕಾಂಪ್ಲೆಕ್ಸ್​
ಪಿ.ಒ. ಮೊಭಂದರ್, ಜಿಲ್ಲೆ-ಈಸ್ಟ್​ ಸಿಂಗ್ಭುಮ್​
ಜಾರ್ಖಂಡ್-832103

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು
ನೋಟಿಫಿಕೇಶ್​ ಬಿಡುಗಡೆ ದಿನಾಂಕ: 11/01/2022
ಸಂದರ್ಶನ ನಡೆಯುವ ದಿನಾಂಕ: 08/02/2022
Published by:Latha CG
First published: