Teachers Recruitment: 2,500 ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. 2500 ಸಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಸದ್ಯದಲ್ಲೇ ನೇಮಕಾತಿ ಆರಂಭಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಸೆ.12): ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ (High School Teachers Recruitment ) ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣ್ತಿತ್ತು ಹೀಗಾಗಿ ಸರ್ಕಾರ ಇದೀಗ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ (Education Minister Nagesh) ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ. 2016 ರ ನಂತರ ನಡೆಯದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ (Recruitment) ಇದಾಗಿದ್ದು, 6 ವರ್ಷಗಳ ಬಳಿಕ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. 2500 ಪೈಕಿ 2500 ಸಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಸದ್ಯದಲ್ಲೇ ನೇಮಕಾತಿ ಆರಂಭಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ನಾಗೇಶ್ ಟ್ವೀಟ್​

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು.

ಸರ್ಕಾರಿ ಶಾಲೆಯಲ್ಲಿ ಕೆಲಸ ಪಡೆಯಲು ಕಾಯುತ್ತಿದ್ದವರಿಗೆ ಕೊನೆಗೂ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿದೆ.

ಇದನ್ನೂ ಓದಿ: Percentage Scam: ಶಿಕ್ಷಣ ಇಲಾಖೆಗೂ ಕಾಲಿಟ್ಟ ಕಮೀಷನ್ ಭೂತ! ಶಿಕ್ಷಣ ಸಚಿವ ನಾಗೇಶ್ ವಿರುದ್ಧ ಪ್ರಧಾನಿಗೆ ದೂರು!

ಉತ್ತಮ ಶಿಕ್ಷಕ ಉತ್ತಮ ಶಿಕ್ಷಕಿಯರ ಪಟ್ಟಿ ಬಿಡುಗಡೆ

ಶಿಕ್ಷಕರ ದಿನವನ್ನು ಸೆಪ್ಟೆಂಬರ್ 5ರಂದು ದೇಶದಾದ್ಯಂತ ಆಚರಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 5 ರಂದು, ದೇಶಾದ್ಯಂತ ಶಿಕ್ಷಕರನ್ನು ಗೌರವಿಸಲಾಗಿತ್ತು. ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣಾರ್ಥವಾಗಿ ಶಿಕ್ಷಕರ ದಿನವನ್ನು ಸಹ ಆಚರಿಸಲಾಗುತ್ತದೆ. ಸೆಪ್ಟೆಂಬರ್ 5ಕ್ಕೆ ಉತ್ತಮ ಶಿಕ್ಷಕರನ್ನು ಗೌರವಿಸಲಾಗುತ್ತದೆ. ರಾಜ್ಯ ಸರ್ಕಾರ ಉತ್ತಮ ಶಿಕ್ಷಕ ಉತ್ತಮ ಶಿಕ್ಷಕಿಯರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಾಥಮಿಕ ಶಾಲೆ ವಿಭಾಗದಿಂದ 20 ಮಂದಿ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಸೇರಿ ಒಟ್ಟು 31 ಶಿಕ್ಷಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ಯಸರ್ಕಾರ ಉತ್ತಮ ಶಿಕ್ಷಕ, ಶಿಕ್ಷಕಿಯರ ಪಟ್ಟಿಯನ್ನು ರಿಲೀಸ್ ಮಾಡಿದೆ. ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದೆ. ಪ್ರಾಥಮಿಕ ಶಾಲೆ ವಿಭಾಗದಿಂದ 20 ಹಾಗೂ ಪ್ರೌಢ ಶಾಲಾ ವಿಭಾಗದಿಂದ 11 ಸೇರಿ ಒಟ್ಟು 31 ಶಿಕ್ಷಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಅನಧಿಕೃತ ಶಾಲೆಗಳನ್ನು ಮುಚ್ಚಿಸುವಂತೆ ಆದೇಶ

ರಾಜ್ಯದಲ್ಲಿ ಖಾಸಗಿ ಶಾಲೆ-ಕಾಲೇಜುಗಳ (School- College) ಸಂಖ್ಯೆ ಗಳೇನು ಕಡಿಮೆ ಇಲ್ಲ. ನೂರಾರು ಹೊಸ ಶಾಲೆ-ಕಾಲೇಜು ಓಪನ್​ ಆಗುತ್ತಲ್ಲೇ ಇರುತ್ತವೆ.  ಖಾಸಗಿ ಶಾಲೆಗಳಿಗೆ ಅನುಮತಿಯನ್ನು ನೀಡಲು ಆನ್‌ಲೈನ್ ನಲ್ಲಿ ಶಿಕ್ಷಣ ಇಲಾಖೆ (Education Department) ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಜುಲೈ 25ರ ವರೆಗೆಗೂ ಅವಕಾಶವನ್ನು ಕಲ್ಪಿಸಲಾಗಿತ್ತು. ಹೊಸ ಖಾಸಗಿ ಶಿಕ್ಷಣ ಸಂಸ್ಥೆ ತೆರೆಯಲು 980ಕ್ಕೂ ಅಧಿಕ ಸಂಸ್ಥೆ ಅರ್ಜಿ ಸಲ್ಲಿಸಿದೆ. ಜೊತೆ ಸರ್ಕಾರ ಅನುಮತಿ ನೀಡೋ ಮುನ್ನವೇ ಮಕ್ಕಳನ್ನು (Children) ನೇಮಕ ಮಾಡಿಕೊಂಡಿದೆ.  ಆದ್ರೆ ಸರ್ಕಾರದ ನಿರ್ಧಾದಿಂದ ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಅತಂತ್ರವಾಗುವ ಹಂತ ತಲುಪಿವೆ.

ಇದನ್ನೂ ಓದಿ: ಅಕ್ಷರ ಕಲಿಸಿಕೊಟ್ಟ ಗುರುಗಳಿಗೆ ಸಲಾಂ, ಶಿಕ್ಷಕರ ದಿನದ ಇತಿಹಾಸ, ಮಹತ್ವ ತಿಳಿಯೋಣ

ರಾಜ್ಯ ಶಿಕ್ಷಣ ಇಲಾಖೆ ಅನುಮತಿ ನೀಡುವ ಮೊದಲೇ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ದಾಖಲಾತಿಯನ್ನು ಮಾಡಿಕೊಂಡಿವೆ. ಮೇ ಮತ್ತು ಜೂನ್ ತಿಂಗಳಲ್ಲಿ ದಾಖಲಾತಿಯನ್ನು ಮಾಡಿಕೊಂಡಿರುವ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿದೆ. ಇದರಿಂದಾಗಿ ಎಚ್ಚೆತ್ತ ಶಿಕ್ಷಣ ಇಲಾಖೆ ಅಧಿಕೃತ ಶಾಲೆಗಳನ್ನು ಸಮೀಪದ ಪೊಲೀಸರಿಗೆ ದೂರು ನೀಡಿ ಮುಚ್ಚಿಸುವಂತೆ ಆದೇಶ ಮಾಡಿದೆ.
Published by:ಪಾವನ ಎಚ್ ಎಸ್
First published: