Income Tax Department Recruitment 2022: ಆದಾಯ ತೆರಿಗೆ ಇಲಾಖೆಯು (Income Tax Department) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಕಮಿಷನರ್ (Assistant Commissioner) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 08-06-2022 ರ ಮೊದಲು ಆಫ್ಲೈನ್ನಲ್ಲಿ ಅರ್ಜಿ ಹಾಕಬಹುದಾಗಿದೆ.
ಹುದ್ದೆಗೆ ಸಂಬಂಧಪಟ್ಟ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ಆದಾಯ ತೆರಿಗೆ ಇಲಾಖೆ |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ನವದೆಹಲಿ |
ಹುದ್ದೆಯ ಹೆಸರು |
ಸಹಾಯಕ ಕಮಿಷನರ್ |
ವೇತನ |
ರೂ.15600-39100/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ನಿಯಮ ಅನುಸಾರ |
ವಯೋಮಿತಿ |
56 ವರ್ಷ |
ಅರ್ಜಿ ಕಳುಹಿಸುವ ವಿಳಾಸ |
ಅಂಡರ್ ಸೆಕ್ರೆಟರಿ (CAT), ಹಣಕಾಸು ಸಚಿವಾಲಯ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ. 245-A, ನಾರ್ತ್ ಬ್ಲಾಕ್, ನವದೆಹಲಿ-110001 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
08-06-2022 |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ನವದೆಹಲಿಯಲ್ಲಿ ಖಾಲಿ ಇರುವ 1 ಸಹಾಯಕ ಕಮಿಷನರ್ ಹುದ್ದೆ ಭರ್ತಿಗೆ ಆದಾಯ ತೆರಿಗೆ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ತಕ್ಕ ಶಿಕ್ಷಣ ಹಾಗೂ 3 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಜೂನ್ 8 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15600-39100/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ನವದೆಹಲಿ
ಹುದ್ದೆಯ ಹೆಸರು: ಸಹಾಯಕ ಕಮಿಷನರ್
ವೇತನ: ರೂ.15600-39100/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಆದಾಯ ತೆರಿಗೆ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅನುಭವದ ವಿವರಗಳು
ಅಭ್ಯರ್ಥಿಗಳು ನಿಯಂತ್ರಕ ಕಾನೂನುಗಳ ಜಾರಿ ಅಥವಾ ಅಪರಾಧಗಳ ತನಿಖೆ ಮತ್ತು ಅದಕ್ಕೆ ಸಂಬಂಧಿಸಿದ ಗುಪ್ತಚರ ಸಂಗ್ರಹಣೆಯಲ್ಲಿ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಸೂಪರ್ ಅವಕಾಶ - 4710 ಹುದ್ದೆಗೆ ಅರ್ಜಿ ಆಹ್ವಾನ
ವಯಸ್ಸಿನ ಮಿತಿ: ಆದಾಯ ತೆರಿಗೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 08-06-2022 ರಂತೆ 56 ವರ್ಷಗಳು.
ವಯಸ್ಸಿನ ಸಡಿಲಿಕೆ:
ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ವೆಬ್ಸೈಟ್: incometaxindia.gov.in
ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಂಡರ್ ಸೆಕ್ರೆಟರಿ (CAT), ಹಣಕಾಸು ಸಚಿವಾಲಯ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ. 245-A, ನಾರ್ತ್ ಬ್ಲಾಕ್, ನವದೆಹಲಿ-110001 ಕಳುಹಿಸಬೇಕಾಗುತ್ತದೆ.
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-05-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-06-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ