• ಹೋಂ
  • »
  • ನ್ಯೂಸ್
  • »
  • Jobs
  • »
  • IDBI Bank Recruitment: ಐಡಿಬಿಐ ಬ್ಯಾಂಕ್​ನಲ್ಲಿ 226 ಹುದ್ದೆಗಳಿಗೆ ನೇಮಕಾತಿ; ಯಾವುದೇ ಪದವೀಧರರು ಅರ್ಜಿ ಸಲ್ಲಿಸಿ

IDBI Bank Recruitment: ಐಡಿಬಿಐ ಬ್ಯಾಂಕ್​ನಲ್ಲಿ 226 ಹುದ್ದೆಗಳಿಗೆ ನೇಮಕಾತಿ; ಯಾವುದೇ ಪದವೀಧರರು ಅರ್ಜಿ ಸಲ್ಲಿಸಿ

ಐಡಿಬಿಐ ಬ್ಯಾಂಕ್​

ಐಡಿಬಿಐ ಬ್ಯಾಂಕ್​

ಸ್ಪೇಷಲ್​ ಕೇಡರ್​ ಅಡಿಯಲ್ಲಿ ಐಡಿಬಿಐ ಬ್ಯಾಂಕ್​ ಈ ನೇಮಕಾತಿಗೆ ಮುಂದಾಗಿದೆ. ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

  • Share this:

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (Industrial Development Bank of India-IDBI) 226 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಜುಲೈ 10 ಆಗಿದೆ.


ಸ್ಪೇಷಲ್​ ಕೇಡರ್​ ಅಡಿಯಲ್ಲಿ ಐಡಿಬಿಐ ಬ್ಯಾಂಕ್​ ಈ ನೇಮಕಾತಿಗೆ ಮುಂದಾಗಿದೆ. ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಕೆಳಗಿನಂತಿದೆ.


ಬ್ಯಾಂಕ್ ಹೆಸರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI ಬ್ಯಾಂಕ್)
ಹುದ್ದೆಯ ಹೆಸರು: ಮ್ಯಾನೇಜರ್, ಸಹಾಯಕ ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 226
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 48170-89890 ರೂ ಪ್ರತಿ ತಿಂಗಳು

ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
ಮ್ಯಾನೇಜರ್ - ಗ್ರೇಡ್ ಬಿ82ಯಾವುದೇ ವಿಯಷದಲ್ಲಿ ಪದವಿ25-35 ವರ್ಷ
ಸಹಾಯಕ ಜನರಲ್ ಮ್ಯಾನೇಜರ್ (AGM) - ಗ್ರೇಡ್ ಸಿ111ಬಿಇ, ಬಿಟೆಕ್​ ಪದವಿ28-40 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ (DGM) - ಗ್ರೇಡ್ ಡಿ33ಬಿಇ, ಬಿಟೆಕ್​ ಪದವಿ35-45 ವರ್ಷ

ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ, ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳು
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನಅಭ್ಯರ್ಥಿಗಳು: 10 ವರ್ಷಗಳು


ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು: 200 ರೂ
ಸಾಮಾನ್ಯಮತ್ತು ಒಬಿಸಿ ಅಭ್ಯರ್ಥಿಗಳು: 1000 ರೂ


ಪಾವತಿ ವಿಧಾನ: ಆನ್‌ಲೈನ್


ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಅನುಭವ, ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ


ಇದನ್ನು ಓದಿ: ಕೋಲ್​ ಇಂಡಿಯಾದಲ್ಲಿ ಭರ್ಜರಿ ನೇಮಕಾತಿ; 1050 ಹುದ್ದೆಗೆ ಅಧಿಸೂಚನೆ


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಜೂನ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 10 ಜುಲೈ 2022


ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ 25 ಜೂನ್ 2022 ರಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅಧಿಕೃತ ವೆಬ್‌ಸೈಟ್: idbibank.in


ಇದನ್ನು ಓದಿ: ನರ್ಸಿಂಗ್​ ಅಭ್ಯರ್ಥಿಗಳಿಗೆ ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ವಿಧಾನ


-ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


-ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

top videos
    First published: