IIIT Bangalore Recruitment: ಬೆಂಗಳೂರಿನ ಐಐಐಟಿಯಲ್ಲಿ ಬಿಕಾಂ ಆದವರಿಗೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಿ

ವಾಣಿಜ್ಯ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 15 ಆಗಿದೆ.

ಐಐಐಟಿ

ಐಐಐಟಿ

  • Share this:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಅಕೌಂಟೆಂಟ್ (Assistant Accountant)​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಾಣಿಜ್ಯ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 15 ಆಗಿದೆ.

    ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿ (Job Description)



























    ಹುದ್ದೆಹುದ್ದೆ ವಿವರ
    ಸಂಸ್ಥೆಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು
    ಹುದ್ದೆಸಹಾಯಕ ಅಕೌಂಟೆಂಟ್ (CPE)
    ಒಟ್ಟು ಹುದ್ದೆನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳಬೆಂಗಳೂರು
    ಸಂಬಳ:ಐಐಐಟಿ ಬೆಂಗಳೂರು ನಿಯಮಗಳ ಪ್ರಕಾರ

    ವಿದ್ಯಾರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಕಾಂ ಅಥವಾ ಎಂಕಾಂ ಪದವಿಯನಮ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: 481 ಮ್ಯಾನೇಜ್​ಮೆಂಟ್​ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆದವರಿಗೆ ಅವಕಾಶ

    ಅನುಭವದ ವಿವರಗಳು
    ಅಭ್ಯರ್ಥಿಗಳು MS ಆಫೀಸ್ ಅಪ್ಲಿಕೇಶನ್‌ಗಳಲ್ಲಿ ವಿಶೇಷವಾಗಿ EXCEL ಅಪ್ಲಿಕೇಶನ್‌ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಐಐಐಟಿ ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01  ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iiitb.ac.in

    ಇದನ್ನು ಓದಿ: ರೈಲ್ವೆ ಇಲಾಖೆಯಲ್ಲಿ 1659 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೆ ಅವಕಾಶ

    ಅರ್ಜಿ ಸಲ್ಲಿಕೆ ವಿಧಾನ (How To Apply)

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: