IIIT Recruitment: ಸಿಸ್ಟಂ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ

ಸಿಸ್ಟಂ ಇಂಜಿನಿಯರ್​ ಸೇರಿದಂತೆ ಇತರೆ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಬಿಇ​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಐಐಐಟಿ

ಐಐಐಟಿ

  • Share this:
    ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ (international Institute of Information Technology )ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಟಂ ಇಂಜಿನಿಯರ್​ ಸೇರಿದಂತೆ ಇತರೆ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಬಿಇ​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಸೆಪ್ಟೆಂಬರ್​ 1 ರೊಳಗೆ  ಹುದ್ದೆಗೆ ಅಪ್ಲೈ ಮಾಡಬಹುದಾಗಿದೆ.

    5G mmWave ಬೇಸ್ ಸ್ಟೇಷನ್‌ನ ಸೆಟಪ್‌ಗಾಗಿ ಹಾರ್ಡ್‌ವೇರ್‌ ನಿರ್ವಹಣೆ ಸಂಬಂಧಿಸಿದಂತೆ ಈ ನೇಮಕಾತಿ ನಡೆಸಲಾಗುವುದು.



























    ಹುದ್ದೆ ಮಾಹಿತಿಹುದ್ದೆ ವಿವಿರ
    ಸಂಸ್ಥೆಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ
    ಹುದ್ದೆಸಿಸ್ಟಂ ಇಂಜಿನಿಯರ್
    ಒಟ್ಟು ಹುದ್ದೆ ಸಂಖ್ಯೆನಿರ್ದಿಷ್ಟ ಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು
    ವೇತನಐಐಐಟಿ ನಿಯಮಗಳ ಅನುಸಾರ

    ಶೈಕ್ಷಣಿಕ ಅರ್ಹತೆ: ಐಐಐಟಿ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು.

    ಅನುಭವ: ಅಭ್ಯರ್ಥಿಯು ಸಂಬಂಧಿಸಿದ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರಬೇಕು.

    ವಯಸ್ಸಿನ ಮಿತಿ: ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿ 35  ವಯಸ್ಸಿನ ಮಿತಿಯನ್ನು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಅರ್ಜಿ ಸಲ್ಲಿಕೆ: ಆನ್​ಲೈನ್​​ ಮೂಲಕ

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1 ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iiitb.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: